A PHP Error was encountered

Severity: Notice

Message: Trying to access array offset on value of type null

Filename: controllers/Dictionary.php

Line Number: 318

Backtrace:

File: /Appdata/padakanaja.karnataka.gov.in/application/controllers/Dictionary.php
Line: 318
Function: _error_handler

File: /Appdata/padakanaja.karnataka.gov.in/index.php
Line: 318
Function: require_once

A PHP Error was encountered

Severity: Notice

Message: Trying to access array offset on value of type null

Filename: controllers/Dictionary.php

Line Number: 319

Backtrace:

File: /Appdata/padakanaja.karnataka.gov.in/application/controllers/Dictionary.php
Line: 319
Function: _error_handler

File: /Appdata/padakanaja.karnataka.gov.in/index.php
Line: 318
Function: require_once

A PHP Error was encountered

Severity: Notice

Message: Trying to access array offset on value of type null

Filename: controllers/Dictionary.php

Line Number: 320

Backtrace:

File: /Appdata/padakanaja.karnataka.gov.in/application/controllers/Dictionary.php
Line: 320
Function: _error_handler

File: /Appdata/padakanaja.karnataka.gov.in/index.php
Line: 318
Function: require_once

Padakanaja - Dictionary View
ಅನಿಸಿಕೆ

ಪದಕೋಶ: ಕಂಪ್ಯೂಟರ್ ತಂತ್ರಜ್ಞಾನ ಪದವಿವರಣ ಕೋಶ | ಇಂಗ್ಲೀಷ್-ಕನ್ನಡ |ಪ್ರಕಾಶಕರು - ಕನ್ನಡ ಅಭಿವೃದ್ಧಿ ಪ್ರಾಧಿಕಾರ (2017)

Show entries
ಕ್ರಮ ಸ೦ಖ್ಯೆ ಇಂಗ್ಲೀಷ್ ಪದ
(English Word)
ಕನ್ನಡ ಪದ
(Kannada Word)
ಕನ್ನಡ ಅರ್ಥ
(Kannada Meaning)
ವಿಷಯ ವರ್ಗೀಕರಣ
(Word Subject)
ವ್ಯಾಕರಣ ವಿಶೇಷ
(Word Grammer)
ಕನ್ನಡ ಉಚ್ಚಾರಣೆ
(Kannada Pronunciation)
ಪರ್ಯಾಯ ಪದ
(Word Synonyms)
ಇಂಗ್ಲೀಷ್ ಅರ್ಥ
(English Meaning)
ಸಂಕ್ಷಿಪ್ತ ವಿವರಣೆ
(Short Description)
ದೀರ್ಘ ವಿವರಣೆ
(Long Description)
ಆಡಳಿತಾತ್ಮಕ ಪದ
(Administrative Word)
281 Software Engineering ಸಾಫ್ಟ್‌ವೇರ್ ಇಂಜಿನಿಯರಿಂಗ್ ನಮ್ಮ ಅಗತ್ಯಗಳಿಗೆ ತಕ್ಕಂತೆ ಪರಿಣಾಮಕಾರಿಯಾಗಿ ಕೆಲಸಮಾಡುವ ತಂತ್ರಾಂಶವನ್ನು ನಿಗದಿತ ಅವಧಿ ಹಾಗೂ ವೆಚ್ಚದ ಮಿತಿಯೊಳಗೆ ರೂಪಿಸಲು ನೆರವಾಗುವ ಪ್ರಕ್ರಿಯೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳನ್ನೆಲ್ಲ ಸಾಫ್ಟ್‌ವೇರ್ ಇಂಜಿನಿಯರುಗಳೆಂದು ಗುರುತಿಸುವುದು ಸಾಮಾನ್ಯ ಅಭ್ಯಾಸ. ಸಾಫ್ಟ್‌ವೇರ್ ಇಂಜಿನಿಯರುಗಳ ಕೆಲಸ ಪ್ರೋಗ್ರಾಮುಗಳನ್ನು - ತಂತ್ರಾಂಶಗಳನ್ನು ರಚಿಸುವುದು ಎನ್ನುವುದೂ ಸಾಮಾನ್ಯವಾಗಿರುವ ಇನ್ನೊಂದು ಅಭಿಪ್ರಾಯ. ಆದರೆ ಸಾಫ್ಟ್‌ವೇರ್ ಇಂಜಿನಿಯರಿಂಗ್ ಕ್ಷೇತ್ರದ ವ್ಯಾಪ್ತಿ ಇಷ್ಟು ಸೀಮಿತವೇನಲ್ಲ. ಇದು ತಂತ್ರಾಂಶ ಅಭಿವೃದ್ಧಿಯನ್ನು ಪ್ರೋಗ್ರಾಮಿಂಗ್‌ಗಷ್ಟೇ ಸೀಮಿತವಾಗಿ ನೋಡದೆ ಅದನ್ನೊಂದು ಕ್ರಮಬದ್ಧ ಪ್ರಕ್ರಿಯೆಯಾಗಿ ರೂಪಿಸಲು ನೆರವಾಗುತ್ತದೆ. ನಮ್ಮ ಅಗತ್ಯಗಳಿಗೆ ತಕ್ಕಂತೆ ಪರಿಣಾಮಕಾರಿಯಾಗಿ ಕೆಲಸಮಾಡುವ ತಂತ್ರಾಂಶವನ್ನು ನಿಗದಿತ ಅವಧಿ ಹಾಗೂ ವೆಚ್ಚದ ಮಿತಿಯೊಳಗೆ ರೂಪಿಸುವುದು ಸಾಫ್ಟ್‌ವೇರ್ ಇಂಜಿನಿಯರಿಂಗ್‌ನ ಮೂಲ ಉದ್ದೇಶ. ತಂತ್ರಾಂಶದ ಉದ್ದೇಶವನ್ನು ನಿಖರವಾಗಿ ಗುರುತಿಸಿ ವಿಶ್ಲೇಷಿಸುವ ಮೂಲಕ ಈ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ತಂತ್ರಾಂಶದ ಉದ್ದೇಶ ಸ್ಪಷ್ಟವಾದ ನಂತರ ಅದಕ್ಕೆ ಅಗತ್ಯವಾದ ವಿನ್ಯಾಸವನ್ನು (ಡಿಸೈನ್) ಸಿದ್ಧಪಡಿಸಲಾಗುತ್ತದೆ. ತಂತ್ರಾಂಶ ಅಭಿವರ್ಧನೆಯ (ಡೆವೆಲಪ್‌ಮೆಂಟ್) ಕೆಲಸ ಪ್ರಾರಂಭವಾಗುವುದು ಇವೆಲ್ಲ ಮುಗಿದ ನಂತರವೇ. ತಂತ್ರಾಂಶ ರಚನೆ ಮುಗಿದ ತಕ್ಷಣ ಅದನ್ನು ಗ್ರಾಹಕರಿಗೆ ಕೊಟ್ಟುಬಿಡುವಂತಿಲ್ಲ. ಅದನ್ನು ವಿವರವಾಗಿ ಪರೀಕ್ಷಿಸಿ, ಇರಬಹುದಾದ ಕುಂದುಕೊರತೆಗಳನ್ನು ಸೂಕ್ತ ಸಮಯದಲ್ಲಿ ಪತ್ತೆಹಚ್ಚಿ ಸರಿಪಡಿಸುವುದು ಕೂಡ ಮುಖ್ಯ ಎಂದು ಸಾಫ್ಟ್‌ವೇರ್ ಇಂಜಿನಿಯರಿಂಗ್ ಪರಿಕಲ್ಪನೆ ಹೇಳುತ್ತದೆ. ಈ ಎಲ್ಲ ಹಂತಗಳ ವಿವರಗಳನ್ನೂ ಕಡತಗಳಲ್ಲಿ ದಾಖಲಿಸಿ ಭವಿಷ್ಯದ ಬಳಕೆಗಾಗಿ ಉಳಿಸಿಡುವುದು ಕೂಡ ಸಾಫ್ಟ್‌ವೇರ್ ಇಂಜಿನಿಯರಿಂಗ್‌ನ ಭಾಗವೇ.
282 Software Maintenance ಸಾಫ್ಟ್‌ವೇರ್ ಮೇಂಟೆನೆನ್ಸ್ ಈಗಾಗಲೇ ಇರುವ ತಂತ್ರಾಂಶವನ್ನು ನಿರ್ವಹಿಸುವ, ಅಗತ್ಯಗಳಿಗೆ ತಕ್ಕಂತೆ ಬದಲಾಯಿಸಿಕೊಳ್ಳುವ ಕೆಲಸ ಕಂಪ್ಯೂಟರಿನ ನಿರ್ವಹಣೆಯೆಂದ ತಕ್ಷಣ ಹೆಚ್ಚಾಗಿ ನಮ್ಮ ಮನಸ್ಸಿಗೆ ಬರುವುದು ಯಂತ್ರಾಂಶದ (ಹಾರ್ಡ್‌ವೇರ್) ನಿರ್ವಹಣೆಯ ವಿಷಯವೇ. ಮೌಸ್ ಕೆಲಸಮಾಡುತ್ತಿಲ್ಲವೆಂದೋ ಮೋಡೆಮ್ ಕೆಟ್ಟಿದೆಯೆಂದೋ ಇನ್ನಾವುದೋ ಭಾಗ ಹಳೆಯದಾಗಿದೆಯೆಂದೋ ಸಾಕಷ್ಟು ಖರ್ಚುಮಾಡಿರುವ ವಿಷಯ ನಮ್ಮೆಲ್ಲರ ನೆನಪಿನಲ್ಲೂ ಇರುತ್ತದೆ. ಆದರೆ ನಿರ್ವಹಣೆ ಬೇಕಿರುವುದು ಕೇವಲ ಯಂತ್ರಾಂಶಕ್ಕೆ ಮಾತ್ರವಲ್ಲ, ನಾವು ಬರೆಯುವ ತಂತ್ರಾಂಶವನ್ನು (ಸಾಫ್ಟ್‌ವೇರ್) ನಿರ್ವಹಿಸುವುದೂ ಸಾಕಷ್ಟು ದೊಡ್ಡ ಕೆಲಸವೇ. ತಂತ್ರಾಂಶದ ರಚನೆಯ ಸಂದರ್ಭದಲ್ಲಿದ್ದ ಅಗತ್ಯಗಳು ನಂತರದ ದಿನಗಳಲ್ಲಿ ಬದಲಾದರೆ ತಂತ್ರಾಂಶದಲ್ಲಿ ಬದಲಾವಣೆಗಳು ಬೇಕಾಗುತ್ತವೆ. ತಂತ್ರಾಂಶ ತನ್ನ ಮೂಲ ಉದ್ದೇಶವನ್ನು ಬಹಳ ಚೆನ್ನಾಗಿ ಪೂರೈಸಿದಾಗಲೂ ಅಷ್ಟೆ: ಬಳಕೆದಾರರು ಅದಕ್ಕೆ ಹೆಚ್ಚುವರಿ ಸೌಲಭ್ಯಗಳನ್ನು ಸೇರಿಸುವಂತೆ ಕೇಳಿದಾಗಲೂ ತಂತ್ರಾಂಶದಲ್ಲಿ ಬದಲಾವಣೆ ಅಗತ್ಯವಾಗುತ್ತದೆ. ತಂತ್ರಾಂಶದ ಬಳಕೆಯಾಗುತ್ತಿರುವ ಕಂಪ್ಯೂಟರುಗಳಲ್ಲಿ ಯಂತ್ರಾಂಶದ, ಅಥವಾ ಆಪರೇಟಿಂಗ್ ಸಿಸ್ಟಂನಂತಹ ತಂತ್ರಾಂಶಗಳ ಬದಲಾವಣೆಯಾದಾಗಲೂ ತಂತ್ರಾಂಶದಲ್ಲಿ ಬದಲಾವಣೆಗಳು ಅಗತ್ಯವಾಗಬಹುದು. ತಂತ್ರಾಂಶ ರಚಿಸುವವರ, ಬಳಸುವವರಷ್ಟೇ ಅಲ್ಲದೆ ಈ ಚಟುವಟಿಕೆಗೆ ಸರಕಾರ ಅಥವಾ ಮಾರುಕಟ್ಟೆಯ ಕಡೆಯಿಂದ ಕಾಣಿಸಿಕೊಳ್ಳುವ ಬದಲಾವಣೆಗಳೂ ಕಾರಣವಾಗಬಹುದು (ಉದಾ: ತೆರಿಗೆ ಸ್ವರೂಪದ ಬದಲಾವಣೆ, ವೆಬ್‌ಸೈಟುಗಳು ಮೊಬೈಲಿನಲ್ಲೂ ಸರಿಯಾಗಿ ಕೆಲಸಮಾಡಬೇಕಾದ ಅನಿವಾರ್ಯತೆ ಇತ್ಯಾದಿ). ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಪತ್ತೆಯಾದ ತೊಂದರೆಗಳನ್ನು ಸರಿಪಡಿಸುವುದು, ಬದಲಾದ ಪರಿಸ್ಥಿತಿಯಲ್ಲಿ ತಂತ್ರಾಂಶದ ಕಾರ್ಯಾಚರಣೆ ನಿರಾತಂಕವಾಗಿರುವಂತೆ ನೋಡಿಕೊಳ್ಳುವುದು, ತಂತ್ರಾಂಶದ ಕಾರ್ಯಕ್ಷಮತೆಯನ್ನು ಉತ್ತಮಪಡಿಸುವುದು - ಹೀಗೆ ತಂತ್ರಾಂಶ ನಿರ್ವಹಣೆಯ ಚಟುವಟಿಕೆಗಳಲ್ಲಿ ಅನೇಕ ವಿಧಗಳಿರುತ್ತವೆ. ತಂತ್ರಾಂಶದಲ್ಲಿ ಯಾವುದೇ ತೊಂದರೆ ಕಾಣಿಸಿಕೊಳ್ಳುವ ಮೊದಲೇ ಅವುಗಳ ಸಾಧ್ಯತೆಯನ್ನು ಅಂದಾಜಿಸಿ ಸರಿಪಡಿಸುವುದೂ ಈ ಚಟುವಟಿಕೆಗಳ ಭಾಗವಾಗಿರುವುದು ಸಾಧ್ಯ.
283 Software Project Management ಸಾಫ್ಟ್‌ವೇರ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ತಂತ್ರಾಂಶ ಅಭಿವೃದ್ಧಿಯ ಕೆಲಸ ಒಂದು ನಿರ್ದಿಷ್ಟ ಯೋಜನೆಗೆ ಅನುಗುಣವಾಗಿ ನಡೆಯುವಂತೆ ನೋಡಿಕೊಳ್ಳುವ ಪ್ರಕ್ರಿಯೆ ತಂತ್ರಾಂಶಗಳನ್ನು ರೂಪಿಸುವಾಗ ಕೆಲಸದ ಅಗಾಧತೆ, ಸಂಕೀರ್ಣ ವಿನ್ಯಾಸ ಇವೆಲ್ಲ ಸೇರಿ ತಂತ್ರಾಂಶ ಅಭಿವೃದ್ಧಿಯ ಕೆಲಸ ಬಹಳ ಕ್ಲಿಷ್ಟವಾಗಿಬಿಡುತ್ತದೆ. ನಿಗದಿತ ಅವಧಿಯೊಳಗೆ ನಿರ್ದಿಷ್ಟ ವೆಚ್ಚದಲ್ಲಿ ಬಳಕೆದಾರರ ಅಗತ್ಯಗಳಿಗೆ ಸರಿಹೊಂದುವಂತಹ ತಂತ್ರಾಂಶವನ್ನು ಅಭಿವೃದ್ಧಿಪಡಿಸಬೇಕಾದ ಸವಾಲನ್ನು ಎದುರಿಸುವ ಈ ಕೆಲಸ ಸುಲಭವೇನಲ್ಲ. ಇಂತಹ ಸನ್ನಿವೇಶಗಳಲ್ಲಿ ತಂತ್ರಾಂಶ ಅಭಿವೃದ್ಧಿಯ ಕೆಲಸ ಒಂದು ನಿರ್ದಿಷ್ಟ ಯೋಜನೆಗೆ ಅನುಗುಣವಾಗಿ ನಡೆದರೆ ಮಾತ್ರ ಅದು ಯಶಸ್ವಿಯಾಗುವುದು ಸಾಧ್ಯ. ಹಾಗೊಂದು ಯೋಜನೆಯನ್ನು ರೂಪಿಸಿ ಅದರಂತೆ ತಂತ್ರಾಂಶ ಅಭಿವೃದ್ಧಿಯ ಕೆಲಸ ಕೈಗೊಳ್ಳಲು ನೆರವಾಗುವುದು 'ಸಾಫ್ಟ್‌ವೇರ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್' ಎಂಬ ಪರಿಕಲ್ಪನೆ. ನಿರ್ದಿಷ್ಟ ಅವಧಿಯಲ್ಲಿ ನಡೆಯುವ ತಂತ್ರಾಂಶವೊಂದರ ರಚನೆ, ಬದಲಾವಣೆ ಅಥವಾ ಉನ್ನತೀಕರಣದ ಕೆಲಸವನ್ನು ಪ್ರಾಜೆಕ್ಟ್ ಎಂದು ಕರೆಯಬಹುದು. ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಕೆಲಸಮಾಡುವವರು ಪ್ರಾಜೆಕ್ಟುಗಳ ಬಗ್ಗೆ ಮಾತನಾಡುತ್ತಾರಲ್ಲ, ಅವೂ ಇಂತಹವೇ. ಯಾವುದೇ ಪ್ರಾಜೆಕ್ಟಿಗೆ ಸಾಕಷ್ಟು ನಿರ್ಬಂಧಗಳಿರುತ್ತವೆ: ಸಮಯ, ವೆಚ್ಚ, ವ್ಯಾಪ್ತಿ - ಹೀಗೆ. ಈ ಎಲ್ಲ ನಿರ್ಬಂಧಗಳನ್ನೂ ಅರಿತುಕೊಂಡು ನಮ್ಮ ಕೆಲಸವನ್ನು ಸರಿಯಾಗಿ ನಿಭಾಯಿಸಿದಾಗಲಷ್ಟೆ ಪ್ರಾಜೆಕ್ಟ್ ಯಶಸ್ವಿಯಾಗುವುದು ಸಾಧ್ಯ. ಇದು ಸಾಧ್ಯವಾಗುವ ನಿಟ್ಟಿನಲ್ಲಿ ನೆರವು ನೀಡುವುದು ಸಾಫ್ಟ್‌ವೇರ್ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್‌ನ ಉದ್ದೇಶ. ತಂತ್ರಾಂಶ ತಯಾರಿಯ ಪ್ರಕ್ರಿಯೆಯುದ್ದಕ್ಕೂ ಗ್ರಾಹಕರೊಡನೆ ನಡೆಯುವ ಸಂವಹನ, ತಯಾರಾಗುವ ತಂತ್ರಾಂಶದ ಗುಣಮಟ್ಟ ಮುಂತಾದ ಅಂಶಗಳಿಗೂ ಇಲ್ಲಿ ಪ್ರಾಮುಖ್ಯವಿರುತ್ತದೆ.
284 Spam ಸ್ಪಾಮ್ ಅನಪೇಕ್ಷಿತವಾಗಿ ಬರುವ ಇಮೇಲ್ ಅಥವಾ ಪಠ್ಯಸಂದೇಶ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಯಾದಂತೆ ನಮಗೆ ಲಭ್ಯವಿರುವ ಸಂವಹನ ಮಾಧ್ಯಮಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಸಂದೇಶಗಳನ್ನು, ಕಡತಗಳನ್ನು, ಚಿತ್ರ - ಧ್ವನಿ - ವೀಡಿಯೋಗಳನ್ನು ಕ್ಷಣಾರ್ಧದಲ್ಲಿ ಎಲ್ಲಿಗೆ ಬೇಕಾದರೂ ಕಳುಹಿಸುವುದು ಇದೀಗ ಸಾಧ್ಯವಾಗಿದೆ. ಆದರೆ ಈ ಬೆಳವಣಿಗೆಯ ಜೊತೆಗೆ ಅನಗತ್ಯ ಸಂದೇಶಗಳ ಪಿಡುಗು ಕೂಡ ದೊಡ್ಡದಾಗಿ ಬೆಳೆದಿದೆ. ಇಮೇಲ್ ಮಾಧ್ಯಮದಲ್ಲಂತೂ ಬಯಸದ ಮಾಹಿತಿಯನ್ನು ಬಲವಂತವಾಗಿ ಹೊತ್ತುತರುವ ಮಾಹಿತಿಯ ಕಾಟ ವಿಪರೀತ. ಇಂತಹ ರದ್ದಿ ಸಂದೇಶಗಳನ್ನು 'ಸ್ಪಾಮ್' ಎಂದು ಗುರುತಿಸಲಾಗುತ್ತದೆ. ಜಾಹೀರಾತುಗಳಿಂದ ಪ್ರಾರಂಭಿಸಿ ನಕಲಿ ಮಾಲಿನ ಪ್ರಚಾರ - ಕಾನೂನುಬಾಹಿರ ಔಷಧಗಳ ಮಾರಾಟಗಳವರೆಗೆ ಹಲವು ಉದ್ದೇಶಗಳಿಗಾಗಿ ಸ್ಪಾಮ್ ಸಂದೇಶಗಳನ್ನು ಬಳಸಲಾಗುತ್ತದೆ. ಲಾಭದ ಆಸೆ ತೋರಿಸಿ ವಂಚಿಸುವ 'ಫಿಶಿಂಗ್'ನಂತಹ ದುಷ್ಕೃತ್ಯಗಳಲ್ಲೂ ಸ್ಪಾಮ್ ಸಂದೇಶಗಳು ಬಳಕೆಯಾಗುತ್ತವೆ. ನಮ್ಮ ಅನುಮತಿಯಿಲ್ಲದೆ ಬರುವ ಸಂದೇಶಗಳಷ್ಟೆ ಸ್ಪಾಮ್ ಎಂದು ಕರೆಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಯಾವುದೋ ಸನ್ನಿವೇಶದಲ್ಲಿ ನಮ್ಮ ಸಂಪರ್ಕ ವಿವರ ಪಡೆದುಕೊಂಡವರು ಮತ್ತೆಮತ್ತೆ ಇಮೇಲ್ ಕಳುಹಿಸಿ ಕಿರಿಕಿರಿಮಾಡುತ್ತಾರಲ್ಲ (ಉದಾ: ಆನ್‌ಲೈನ್ ಶಾಪಿಂಗ್ ಜಾಲತಾಣಗಳು), ಅಂತಹ ಸಂದೇಶಗಳೂ ಸ್ಪಾಮ್ ಗುಂಪಿಗೇ ಸೇರುತ್ತವೆ. ಅವನ್ನು 'ಬೇಕನ್' ಎಂದು ಗುರುತಿಸಲಾಗುತ್ತದೆ ಎನ್ನುವುದೊಂದೇ ವ್ಯತ್ಯಾಸ. ಅಂದಹಾಗೆ ರದ್ದಿ ಸಂದೇಶಗಳು ಇಮೇಲ್ ಮಾಧ್ಯಮಕ್ಕಷ್ಟೇ ಸೀಮಿತವೇನಲ್ಲ. ಎಸ್ಸೆಮ್ಮೆಸ್ ಮೂಲಕವೂ ದೊಡ್ಡ ಪ್ರಮಾಣದ ಅನುಪಯುಕ್ತ ಸಂದೇಶಗಳು ಹರಿದುಬರುತ್ತವೆ. ವಾಟ್ಸ್‌ಆಪ್‌ನಲ್ಲೂ ಈ ಸಮಸ್ಯೆ ಇದೆ.
285 Spamdexing ಸ್ಪಾಮ್‌ಡೆಕ್ಸಿಂಗ್ ಸರ್ಚ್ ಫಲಿತಾಂಶಗಳಲ್ಲಿ ಒಳ್ಳೆಯ ಸ್ಥಾನ ಪಡೆದುಕೊಳ್ಳುವ ಉದ್ದೇಶದಿಂದ ಸರ್ಚ್ ಇಂಜನ್‌ಗಳನ್ನು, ಅವು ತಯಾರಿಸುವ ಸೂಚಿಯನ್ನು (ಇಂಡೆಕ್ಸ್) ಮೋಸಗೊಳಿಸಲು ನಡೆಯುವ ಪ್ರಯತ್ನ ವಿಶ್ವವ್ಯಾಪಿ ಜಾಲದಲ್ಲಿ ನಮಗೆ ಬೇಕಾದುದನ್ನು ಹುಡುಕಿಕೊಳ್ಳುವಾಗ ಸರ್ಚ್ ಫಲಿತಾಂಶದ ಮೊದಲ ಕೆಲ ಸ್ಥಾನಗಳಲ್ಲಿರುವ ತಾಣಗಳನ್ನು ಮಾತ್ರವೇ ಗಮನಿಸುವುದು ನಮ್ಮ ಅಭ್ಯಾಸ. ಹೀಗಾಗಿಯೇ ಜಾಲತಾಣಗಳು ಸರ್ಚ್ ಫಲಿತಾಂಶಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳಲು ಪ್ರಯತ್ನಿಸುತ್ತಿರುತ್ತವೆ, ಸರ್ಚ್ ಇಂಜನ್ ಆಪ್ಟಿಮೈಸೇಶನ್ (ಎಸ್‌ಇಒ) ಪ್ರಕ್ರಿಯೆಯ ಮೊರೆಹೋಗುತ್ತವೆ. ಜಾಲತಾಣದಲ್ಲಿ ನಿಜಕ್ಕೂ ಉಪಯುಕ್ತ ಮಾಹಿತಿಯಿದ್ದರೆ, ಎಸ್‌ಇಒ ಪ್ರಕ್ರಿಯೆಯಲ್ಲಿ ಅದನ್ನು ಸರಿಯಾಗಿ ನಿರ್ವಹಿಸಿದರೆ ನೋಡುಗರನ್ನು ಆಕರ್ಷಿಸುವುದು ಸುಲಭ ನಿಜ. ಆದರೆ ಜನರಿಗೆ ತೊಂದರೆಕೊಡುವ ಉದ್ದೇಶದ ತಾಣಗಳು, ಖೊಟ್ಟಿ ಜಾಹೀರಾತುಗಳಿಂದ ದುಡ್ಡುಮಾಡಲು ಹೊರಟ ತಾಣಗಳಿಗೂ ಜನರನ್ನು ಸೆಳೆಯುವ ಹುನ್ನಾರವಿರುತ್ತದಲ್ಲ - ಅವರೂ ಸರ್ಚ್ ಫಲಿತಾಂಶದ ಮೊದಲ ಸ್ಥಾನಗಳ ಮೇಲೆ ಕಣ್ಣಿಟ್ಟಿರುತ್ತಾರೆ. ಸರ್ಚ್ ಫಲಿತಾಂಶದಲ್ಲಿ ತಮ್ಮ ತಾಣ ಉತ್ತಮ ಸ್ಥಾನ ಪಡೆಯುವಂತೆ ಮಾಡಲು ಅವರು ಜನಪ್ರಿಯ ಕೀರ್ವರ್ಡ್‌ಗಳನ್ನು ತಮ್ಮ ತಾಣದಲ್ಲಿ ಸುಮ್ಮನೆ ಸೇರಿಸುತ್ತಾರೆ, ತಮ್ಮ ಪೋಸ್ಟುಗಳಲ್ಲಿ ಸದ್ಯ ಚಾಲ್ತಿಯಲ್ಲಿರುವ ವಿಷಯಗಳನ್ನು ಸುಮ್ಮನೆ ಪ್ರಸ್ತಾಪಿಸುತ್ತಾರೆ. ಬಳಕೆದಾರರನ್ನು ಮೋಸಗೊಳಿಸುವ ಸ್ಪಾಮ್ ಸಂದೇಶಗಳಂತೆ ಈ ಚಟುವಟಿಕೆ ಸರ್ಚ್ ಇಂಜನ್‌ಗಳನ್ನು, ಅವು ತಯಾರಿಸುವ ಸೂಚಿಯನ್ನು (ಇಂಡೆಕ್ಸ್) ಮೋಸಗೊಳಿಸಲು ಪ್ರಯತ್ನಿಸುತ್ತದೆ. ಹಾಗಾಗಿ ಇದನ್ನು 'ಸ್ಪಾಮ್‌ಡೆಕ್ಸಿಂಗ್' ಎಂದು ಕರೆಯುತ್ತಾರೆ. ಈ ಕುತಂತ್ರ ತಡೆಗೆ ಸರ್ಚ್ ಇಂಜನ್‌ಗಳು ಹಲವು ಕ್ರಮಗಳನ್ನು ಕೈಗೊಂಡರೂ ಕೆಲವೊಮ್ಮೆ ಅವನ್ನೆಲ್ಲ ಮೀರಿ ದುರುದ್ದೇಶಪೂರಿತ ತಾಣಗಳು ಸರ್ಚ್ ಫಲಿತಾಂಶಗಳಲ್ಲಿ ಕಾಣಿಸಿಕೊಳ್ಳುವುದುಂಟು. ಹಾಗಾಗಿ ಅಪರಿಚಿತ ತಾಣಗಳಲ್ಲಿ ನಾವು ಏನು ಕ್ಲಿಕ್ ಮಾಡುತ್ತೇವೆ ಎನ್ನುವ ಬಗ್ಗೆ ಎಚ್ಚರವಹಿಸಬೇಕಾದ್ದು ಅನಿವಾರ್ಯ - ಆ ತಾಣ ನಮ್ಮ ಸರ್ಚ್ ಫಲಿತಾಂಶದ ಮೊದಲ ಸ್ಥಾನದಲ್ಲೇ ಇದ್ದರೂ ಕೂಡ!
286 Speech Recognition ಸ್ಪೀಚ್ ರೆಕಗ್ನಿಶನ್ ನಮ್ಮ ಮಾತನ್ನು ಆಲಿಸಿ, ನಾವು ಏನು ಹೇಳುತ್ತಿದ್ದೇವೆ ಎಂದು ಗುರುತಿಸಿ ಅರ್ಥೈಸಿಕೊಂಡು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ಅನುವುಮಾಡಿಕೊಡುವ ತಂತ್ರಜ್ಞಾನ ಕಂಪ್ಯೂಟರಿಗೆ ಆದೇಶಗಳನ್ನು ನೀಡಲು ಕೀಲಿಮಣೆ - ಮೌಸ್ ಬಳಸುವುದು ನಮಗೆ ಗೊತ್ತು. ಸ್ಮಾರ್ಟ್‌ಫೋನಿನಲ್ಲಿ ಟಚ್ ಸ್ಕ್ರೀನ್ ಬಳಸುವುದೂ ನಮಗೆ ಬಹಳ ಸುಲಭ. ಅಂಗಾಂಗಗಳ ಚಲನೆಯ ಮೂಲಕವೇ ಸಾಧನಗಳನ್ನು ನಿಯಂತ್ರಿಸುವ 'ಜೆಸ್ಚರ್ ಕಂಟ್ರೋಲ್' ಬಗೆಗೂ ನಾವು ಕೇಳಿದ್ದೇವೆ. ಕಂಪ್ಯೂಟರು - ಸ್ಮಾರ್ಟ್‌ಫೋನುಗಳಿಗೆ ಆದೇಶ ನೀಡಲು ಇಷ್ಟೆಲ್ಲ ಕಷ್ಟಪಡುವ ಬದಲಿಗೆ ಅವುಗಳೊಡನೆಯೂ ಮಾತನಾಡುವಂತಿದ್ದರೆ? ಮಸಾಲೆದೋಸೆ - ಕಾಫಿ ಬೇಕೆಂದು ಹೋಟಲ್ ಮಾಣಿಗೆ ಹೇಳಿದಂತೆ ಮನೆಯ ನಂಬರ್ ಡಯಲ್ ಮಾಡೆಂದು ನಮ್ಮ ಫೋನಿಗೂ ಹೇಳಬಹುದು, ಅಲ್ಲವೇ? ಇದನ್ನು ಸಾಧ್ಯವಾಗಿಸಿರುವ ತಂತ್ರಜ್ಞಾನವೇ ಸ್ಪೀಚ್ ರೆಕಗ್ನಿಶನ್. ನಾವು ಏನು ಹೇಳುತ್ತಿದ್ದೇವೆ ಎಂದು ಗುರುತಿಸಿ, ಅದನ್ನು ಅರ್ಥೈಸಿಕೊಂಡು, ನಿರ್ದಿಷ್ಟ ಕೆಲಸ ಕೈಗೊಳ್ಳುವಂತೆ ಕಂಪ್ಯೂಟರಿಗೋ ಸ್ಮಾರ್ಟ್‌ಫೋನಿಗೋ ನಿರ್ದೇಶಿಸುವುದನ್ನು ಈ ತಂತ್ರಜ್ಞಾನ ಸಾಧ್ಯವಾಗಿಸುತ್ತದೆ. ಅಷ್ಟೇ ಅಲ್ಲ, ಧ್ವನಿರೂಪದಲ್ಲಿರುವ ಕಡತಗಳನ್ನು (ಭಾಷಣ, ಟೀವಿ ಕಾರ್ಯಕ್ರಮ ಇತ್ಯಾದಿ) ಪಠ್ಯರೂಪಕ್ಕೆ ಪರಿವರ್ತಿಸುವಲ್ಲೂ ಈ ತಂತ್ರಜ್ಞಾನದ ಬಳಕೆ ಸಾಧ್ಯ. ಸ್ಮಾರ್ಟ್‌ಫೋನ್, ಸ್ಮಾರ್ಟ್‌ವಾಚ್ ಮುಂತಾದ ಅನೇಕ ಸಾಧನಗಳಲ್ಲಿ ಈ ತಂತ್ರಜ್ಞಾನ ಈಗಾಗಲೇ ಬಳಕೆಗೆ ಬಂದಿದೆ. ಆಂಡ್ರಾಯ್ಡ್‌ನ 'ಓಕೆ ಗೂಗಲ್' ಹಾಗೂ ಗೂಗಲ್ ಅಸಿಸ್ಟೆಂಟ್, ಆಪಲ್‌ನ 'ಸಿರಿ' ಹಾಗೂ ಮೈಕ್ರೋಸಾಫ್ಟ್‌ನ 'ಕೊರ್ಟಾನಾ' ಸ್ಪೀಚ್ ರೆಕಗ್ನಿಶನ್ ಬಳಸುತ್ತಿರುವ ಇಂತಹ ಸೌಲಭ್ಯಗಳಿಗೆ ಪ್ರಮುಖ ಉದಾಹರಣೆಗಳು. ನಿರ್ದಿಷ್ಟ ಆಪ್ ತೆರೆಯುವುದು, ದೂರವಾಣಿ ಕರೆ ಮಾಡುವುದು, ಸಂದೇಶ ಕಳುಹಿಸುವುದು, ಅಗತ್ಯ ಮಾಹಿತಿ ಹುಡುಕುವುದು, ಮಾಡಬೇಕಾದ ಕೆಲಸಗಳನ್ನು ಗುರುತಿಟ್ಟುಕೊಳ್ಳುವುದು - ಹೀಗೆ ಹಲವಾರು ಉದ್ದೇಶಗಳಿಗೆ ಇಂತಹ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು.
287 Speech to Text ಸ್ಪೀಚ್ ಟು ಟೆಕ್ಸ್ಟ್ ಧ್ವನಿಯನ್ನು ಪಠ್ಯರೂಪಕ್ಕೆ ಪರಿವರ್ತಿಸುವ ತಂತ್ರಜ್ಞಾನ ಕಂಪ್ಯೂಟರಿಗೆ, ಸ್ಮಾರ್ಟ್‌ಫೋನಿಗೆ ಆದೇಶ ನೀಡಲು ನಾವು ಹಲವು ಮಾರ್ಗಗಳನ್ನು ಬಳಸುವುದು ಸಾಧ್ಯ. ಕೀಲಿ ಒತ್ತುವುದು, ಮೌಸಿನ ಕ್ಲಿಕ್, ಬೆರಳ ಸ್ಪರ್ಶಗಳೆಲ್ಲ ಇಂತಹ ಮಾರ್ಗಗಳೇ. ಬಳಕೆದಾರರ ಧ್ವನಿಯನ್ನು ಗುರುತಿಸುವ 'ಸ್ಪೀಚ್ ರೆಕಗ್ನಿಶನ್' ತಂತ್ರಜ್ಞಾನ ಕೂಡ ಆದೇಶಗಳನ್ನು ಗ್ರಹಿಸಲೆಂದೇ ಇರುವ ಉಪಾಯ. ಬಳಕೆದಾರರ ಧ್ವನಿಯನ್ನು ಗ್ರಹಿಸಲು ಸಾಧ್ಯವಾದ ಮೇಲೆ ಅದನ್ನು ಪಠ್ಯರೂಪಕ್ಕೂ ಪರಿವರ್ತಿಸಿದರೆ ಹೇಗೆ? 'ಸ್ಪೀಚ್ ಟು ಟೆಕ್ಸ್ಟ್' ತಂತ್ರಜ್ಞಾನದ ಬೆಳವಣಿಗೆಗೆ ಕಾರಣವಾಗಿರುವುದು ಇದೇ ಆಲೋಚನೆ. ನಮ್ಮ ಮಾತುಗಳನ್ನು ಬೇರೆಯವರಿಂದ ಬರೆಸಿದಂತೆಯೇ (ಉಕ್ತಲೇಖನ) ಕೆಲಸಮಾಡುವ ವಿಧಾನ ಇದು. ಬೇರೊಬ್ಬ ವ್ಯಕ್ತಿ ಬರೆದುಕೊಳ್ಳುವ ಬದಲಿಗೆ ಇಲ್ಲಿ ಕಂಪ್ಯೂಟರ್ ಅಥವಾ ಸ್ಮಾರ್ಟ್‌ಫೋನ್ ಆ ಕೆಲಸ ಮಾಡುತ್ತದೆ ಎನ್ನುವುದಷ್ಟೇ ವ್ಯತ್ಯಾಸ. ಭಾಷಣಗಳನ್ನು, ಸಭೆಯ ನಡಾವಳಿಗಳನ್ನು ಕ್ಷಿಪ್ರವಾಗಿ ಪಠ್ಯರೂಪಕ್ಕೆ ಪರಿವರ್ತಿಸಲು ಇದು ಸುಲಭ ವಿಧಾನ. ದೈಹಿಕ ಸಮಸ್ಯೆಗಳಿಂದ ಕೀಬೋರ್ಡ್ ಬಳಸಲು ಸಾಧ್ಯವಿಲ್ಲದವರಿಗೂ ಸ್ಪೀಚ್ ಟು ಟೆಕ್ಸ್ಟ್ ತಂತ್ರಾಂಶಗಳು ನೆರವಾಗಬಲ್ಲವು (ಇಂತಹ ಯಾವುದೇ ತಂತ್ರಾಂಶ ನಮ್ಮ ಧ್ವನಿಯನ್ನು ಎಷ್ಟು ನಿಖರವಾಗಿ ಗುರುತಿಸಬಲ್ಲದು ಎನ್ನುವುದು ನಮ್ಮ ಉಚ್ಚಾರಣೆ, ತಂತ್ರಾಂಶದ ಕಾರ್ಯಕ್ಷಮತೆ, ನಾವು ಬಳಸುವ ಮೈಕ್‌ನ ಗುಣಮಟ್ಟ - ಹೀಗೆ ಹಲವು ಅಂಶಗಳನ್ನು ಅವಲಂಬಿಸಿರುತ್ತದೆ).
288 Spider ಸ್ಪೈಡರ್ ವಿಶ್ವವ್ಯಾಪಿ ಜಾಲದಲ್ಲಿರುವ ಜಾಲತಾಣಗಳನ್ನು ಸ್ವಯಂಚಾಲಿತವಾಗಿ ಪರಿಶೀಲಿಸಿ ಆ ತಾಣಗಳಲ್ಲಿ ಏನೆಲ್ಲ ಇದೆ ಎನ್ನುವ ಬಗ್ಗೆ ಮಾಹಿತಿ ಕಲೆಹಾಕುವ ತಂತ್ರಾಂಶ; ಸರ್ಚ್ ಫಲಿತಾಂಶಗಳಲ್ಲಿ ಈ ಮಾಹಿತಿಯನ್ನೇ ಬಳಸಲಾಗುತ್ತದೆ. ವಿಶ್ವವ್ಯಾಪಿ ಜಾಲದಲ್ಲಿ ನಮಗೆ ಬೇಕಾದ ಮಾಹಿತಿ ಎಲ್ಲಿದೆ ಎನ್ನುವುದನ್ನು ಸರ್ಚ್ ಇಂಜನ್‌ಗಳ ಮೂಲಕ ಸುಲಭವಾಗಿ ತಿಳಿದುಕೊಳ್ಳಬಹುದು, ನಿಜ. ಆದರೆ ಇಷ್ಟೆಲ್ಲ ವಿಷಯಗಳನ್ನು ನಮಗೆ ತಿಳಿಸಲು ಸರ್ಚ್ ಇಂಜನ್‌ಗೆ ಸಾಧ್ಯವಾಗುವುದು ಹೇಗೆ? ಈ ಕೆಲಸಕ್ಕಾಗಿ ಅವು ಸಾಕಷ್ಟು ತಯಾರಿ ಮಾಡಿಟ್ಟುಕೊಂಡಿರುತ್ತವೆ. ಸ್ವಯಂಚಾಲಿತ ತಂತ್ರಾಂಶ, ಅಂದರೆ 'ಬಾಟ್'ಗಳ ನೆರವಿನಿಂದ ಅಪಾರ ಸಂಖ್ಯೆಯ ಜಾಲತಾಣಗಳನ್ನು ಪರಿಶೀಲಿಸುವ ಸರ್ಚ್ ಇಂಜನ್‌ಗಳು ಆ ತಾಣಗಳಲ್ಲಿ ಏನೆಲ್ಲ ಇದೆ ಎನ್ನುವ ಬಗ್ಗೆ ಒಂದಷ್ಟು ವಿವರಗಳನ್ನು ಉಳಿಸಿಟ್ಟುಕೊಳ್ಳುತ್ತವೆ. ನಾವು ಸರ್ಚ್ ಮಾಡಿದಾಗ ನಮಗೆ ಬೇಕಾದ ಮಾಹಿತಿಯಿರುವ ಜಾಲತಾಣಗಳ ಪಟ್ಟಿ ಥಟ್ಟನೆ ಕಾಣಿಸಿಕೊಳ್ಳುವುದಕ್ಕೆ ಈ ವಿವರಗಳೇ ಮೂಲ. ಈ ಬಾಟ್‌ಗಳ ಹುಡುಕಾಟ ಸಾಮಾನ್ಯವಾಗಿ ಅತ್ಯಂತ ಪ್ರಸಿದ್ಧ ಜಾಲತಾಣಗಳು ಹಾಗೂ ಅತಿಹೆಚ್ಚು ಬಳಕೆದಾರರಿರುವ ಸರ್ವರ್‌ಗಳಿಂದ ಪ್ರಾರಂಭವಾಗುತ್ತದೆ. ತಾಣಗಳಲ್ಲಿರುವ ಮಾಹಿತಿಯನ್ನು ಗಮನಿಸುವುದರ ಜೊತೆಗೆ ಅಲ್ಲಿರುವ ಎಲ್ಲ ಲಿಂಕ್‌ಗಳನ್ನೂ ಇವು ಹಿಂಬಾಲಿಸುವುದರಿಂದ ಬಾಟ್‌ಗಳ ನಿಲುಕಿಗೆ ಸಿಗುವ ಪುಟಗಳ ಸಂಖ್ಯೆ ಬೆಳೆಯುತ್ತಲೇ ಹೋಗುತ್ತದೆ. ಹೀಗೆ ವಿವರ ಸಂಗ್ರಹಿಸುವ ತಂತ್ರಾಂಶಗಳಿಗೆ ನೆರವಾಗಲೆಂದೇ ಜಾಲತಾಣಗಳಲ್ಲಿ ನಿರ್ದಿಷ್ಟ ರೂಪದ ಮಾಹಿತಿಯನ್ನು ಉಳಿಸಿಡುವ ಅಭ್ಯಾಸವೂ ಇದೆ. ಅಷ್ಟೇ ಏಕೆ, ಬಾಟ್‌ಗಳಿಗೆ ನಮ್ಮ ತಾಣದಲ್ಲಿರುವ ಮಾಹಿತಿಯ ತಂಟೆಗೆ ಬರಬೇಡಿ ಎಂದು ಸೂಚಿಸುವುದೂ ಸಾಧ್ಯ. ಬೃಹತ್ ಜೇಡರಬಲೆಯಂತಿರುವ ಜಾಲಲೋಕದಲ್ಲಿ ಸರಾಗವಾಗಿ ಓಡಾಡುತ್ತವಲ್ಲ, ಅದಕ್ಕಾಗಿಯೇ ಈ ಬಾಟ್‌ಗಳನ್ನು 'ಸ್ಪೈಡರ್' (ಜೇಡ) ಎಂದೂ ಗುರುತಿಸಲಾಗುತ್ತದೆ. ವೆಬ್ ಕ್ರಾಲರ್ ಎನ್ನುವುದು ಇವುಗಳ ಇನ್ನೊಂದು ಹೆಸರು.
289 Spyware ಸ್ಪೈವೇರ್ ಬಳಕೆದಾರರಿಗೆ ಗೊತ್ತಾಗದಂತೆ ಅವರ ಕಂಪ್ಯೂಟರಿನಲ್ಲಿ ಅವಿತಿದ್ದು ಅವರ ಚಟುವಟಿಕೆಗಳನ್ನೆಲ್ಲ ಗಮನಿಸಿಕೊಳ್ಳುವ, ಆ ಬಗ್ಗೆ ತನ್ನ ಸೃಷ್ಟಿಕರ್ತನಿಗೆ ಮಾಹಿತಿ ನೀಡುವ ಕುತಂತ್ರಾಂಶ ಕಂಪ್ಯೂಟರುಗಳ ಕಾರ್ಯಾಚರಣೆಗೆ ತೊಂದರೆಮಾಡುವುದು, ಶೇಖರಿಸಿಟ್ಟ ಮಾಹಿತಿಯನ್ನು ಹಾಳುಮಾಡುವುದು, ವೈಯಕ್ತಿಕ ಮಾಹಿತಿಯನ್ನು ಕದ್ದು ದುರ್ಬಳಕೆ ಮಾಡಿಕೊಳ್ಳುವುದು - ಹೀಗೆ ಹಲವು ರೀತಿಯಲ್ಲಿ ತೊಂದರೆಕೊಡುವ ದುರುದ್ದೇಶಪೂರಿತ ತಂತ್ರಾಂಶಗಳನ್ನು ಮಾಲ್‌ವೇರ್ ಅಥವಾ ಕುತಂತ್ರಾಂಶಗಳೆಂದು ಗುರುತಿಸಲಾಗುತ್ತದೆ. ಇಂತಹ ಕುತಂತ್ರಾಂಶಗಳಲ್ಲಿ ಸ್ಪೈವೇರ್ ಕೂಡ ಒಂದು. ಬಳಕೆದಾರರಿಗೆ ಗೊತ್ತಾಗದಂತೆ ಅವರ ಕಂಪ್ಯೂಟರಿನಲ್ಲಿ ಅವಿತಿದ್ದು ಅವರ ಚಟುವಟಿಕೆಗಳನ್ನೆಲ್ಲ ಗಮನಿಸಿಕೊಳ್ಳುವುದು ಮತ್ತು ಆ ಬಗ್ಗೆ ತನ್ನ ಸೃಷ್ಟಿಕರ್ತನಿಗೆ ಮಾಹಿತಿ ನೀಡುವುದು ಈ ಕುತಂತ್ರಾಂಶದ ಕೆಲಸ. ಬಳಕೆದಾರರು ಯಾವ ತಾಣಗಳಿಗೆ ಭೇಟಿಕೊಡುತ್ತಾರೆ ಎನ್ನುವ ಬಗೆಗೆ ಮಾಹಿತಿ ಸಂಗ್ರಹಿಸುವುದು, ಅವರು ಟೈಪ್ ಮಾಡಿದ್ದನ್ನೆಲ್ಲ ಒಂದೆಡೆ ದಾಖಲಿಸಿಕೊಂಡು ಅದರಲ್ಲಿರಬಹುದಾದ ಖಾಸಗಿ ಮಾಹಿತಿಯನ್ನು (ಉದಾ: ಬ್ಯಾಂಕ್ ಖಾತೆ ಅಥವಾ ಕ್ರೆಡಿಟ್ ಕಾರ್ಡ್ ವಿವರ) ದುರುಪಯೋಗಪಡಿಸಿಕೊಳ್ಳುವುದು, ತಂತ್ರಾಂಶಗಳ ಆಯ್ಕೆಗಳನ್ನು ಬದಲಿಸುವುದು, ನಮ್ಮ ಆಯ್ಕೆಯ ಜಾಲತಾಣದ ಬದಲು ಬೇರೆ ಯಾವುದೋ ತಾಣವನ್ನು ತೆರೆಯುವುದು - ಹೀಗೆ ಸ್ಪೈವೇರ್ ಹಾವಳಿ ಅನೇಕ ಬಗೆಯದಾಗಿರುತ್ತದೆ. ಜಾಹೀರಾತುಗಳನ್ನು ಪ್ರದರ್ಶಿಸುವ ಕೆಲ ತಂತ್ರಾಂಶಗಳೂ (ಆಡ್‌ವೇರ್) ಗೂಢಚರ್ಯೆ ಮಾಡುತ್ತವೆ. ಇಂಟರ್‌ನೆಟ್ ಬ್ರೌಸಿಂಗ್ ವೇಗ ಹೆಚ್ಚಿಸುತ್ತೇವೆಂದೋ ಕುತಂತ್ರಾಂಶಗಳಿಂದ ರಕ್ಷಿಸುತ್ತೇವೆಂದೋ ಹೇಳಿಕೊಳ್ಳುವ ತಂತ್ರಾಂಶಗಳು ಸ್ವತಃ ಸ್ಪೈವೇರ್‌ಗಳಾಗಿರುವ ಸಾಧ್ಯತೆ ಇರುತ್ತದೆ. ಇತರ ಕುತಂತ್ರಾಂಶಗಳಂತೆ ಸ್ಪೈವೇರ್‌ಗಳಿಂದ ಪಾರಾಗಲೂ ಆಂಟಿವೈರಸ್ ತಂತ್ರಾಂಶಗಳ ಮೊರೆಹೋಗುವುದು ಅನಿವಾರ್ಯ. ಅಪರಿಚಿತ ತಾಣಗಳಿಂದ ತಂತ್ರಾಂಶಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವುದನ್ನು ತಪ್ಪಿಸುವುದೂ ಒಳ್ಳೆಯ ಅಭ್ಯಾಸವೇ.
290 SQL ಎಸ್‌ಕ್ಯೂಎಲ್ ಸ್ಟ್ರಕ್ಚರ್ಡ್ ಕ್ವೆರಿ ಲ್ಯಾಂಗ್ವೆಜ್; ದತ್ತಸಂಚಯಗಳನ್ನು ನಿರ್ವಹಿಸುವಾಗ ನಮ್ಮ ಆದೇಶಗಳನ್ನು ದತ್ತಸಂಚಯಕ್ಕೆ ಹೇಳಲು ಬಳಕೆಯಾಗುವ ಭಾಷೆ ಭಾರೀ ಪ್ರಮಾಣದ ದತ್ತಾಂಶವನ್ನು ಉಳಿಸಿಡಲು ದತ್ತಸಂಚಯ, ಅಂದರೆ ಡೇಟಾಬೇಸ್‌ಗಳು ನೆರವಾಗುತ್ತವೆ ಸರಿ. ಆದರೆ ದತ್ತಾಂಶದ ನಿರ್ವಹಣೆ ಒಂದೇಸಲಕ್ಕೆ ಮುಗಿಯುವ ಕೆಲಸವಲ್ಲ: ಹೊಸ ದತ್ತಾಂಶವನ್ನು ಸೇರಿಸುವುದು, ಹಳೆಯದನ್ನು ಬದಲಿಸುವುದು, ಬೇಡದ್ದನ್ನು ಅಳಿಸಿಹಾಕುವುದು - ಹೀಗೆ ಇಲ್ಲಿ ನೂರೆಂಟು ಕೆಲಸಗಳು ನಡೆಯುತ್ತಲೇ ಇರುತ್ತವೆ. ಇದೆಲ್ಲ ಕೆಲಸಗಳಲ್ಲಿ ನಮಗೇನು ಬೇಕೆಂದು ದತ್ತಸಂಚಯಕ್ಕೆ ಹೇಳಲು ಬಳಕೆಯಾಗುವ ಭಾಷೆಯೇ ಸ್ಟ್ರಕ್ಚರ್ಡ್ ಕ್ವೆರಿ ಲ್ಯಾಂಗ್ವೆಜ್. ತಾಂತ್ರಿಕ ಪರಿಭಾಷೆಯಲ್ಲಿ ಎಸ್‌ಕ್ಯೂಎಲ್ ಅಥವಾ ಸೀಕ್ವೆಲ್ ಎಂದು ಗುರುತಿಸುವುದು ಇದನ್ನೇ. ನಮಗೆ ಬೇಕಾದ ದತ್ತಾಂಶವನ್ನು (ಉದಾ: ನಿರ್ದಿಷ್ಟ ಅವಧಿಯಲ್ಲಿ ನಿರ್ದಿಷ್ಟ ಮೊತ್ತಕ್ಕಿಂತ ಹೆಚ್ಚು ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ ಗ್ರಾಹಕರು) ದತ್ತಸಂಚಯದಿಂದ ಪಡೆದುಕೊಳ್ಳಬೇಕೆಂದರೆ ಅಗತ್ಯ ನಿರ್ದೇಶನಗಳನ್ನು ಇದೇ ಭಾಷೆಯಲ್ಲಿ ಬರೆಯಬೇಕಾದ್ದು ಅಗತ್ಯ. ದತ್ತಾಂಶವನ್ನು ಬದಲಾಯಿಸಲು, ಅಳಿಸಿಹಾಕಲು, ಇರುವ ದತ್ತಾಂಶಕ್ಕೆ ಹೊಸ ವಿವರಗಳನ್ನು ಹೆಚ್ಚುವರಿಯಾಗಿ ಸೇರಿಸಲು ಅಗತ್ಯ ನಿರ್ದೇಶನಗಳೂ ಈ ಭಾಷೆಯಲ್ಲಿವೆ. ನಮ್ಮನಿಮ್ಮಂತಹ ಬಳಕೆದಾರರಷ್ಟೇ ಅಲ್ಲ, ಜಾಲತಾಣಗಳು ಹಾಗೂ ಇತರ ತಂತ್ರಾಂಶಗಳೂ ಎಸ್‌ಕ್ಯೂಎಲ್ ಅನ್ನು ಬಳಸುತ್ತವೆ. ಜಾಲತಾಣದಲ್ಲಿ ನೋಂದಣಿ ಸಂಖ್ಯೆಯನ್ನು ದಾಖಲಿಸಿ ಪರೀಕ್ಷಾ ಫಲಿತಾಂಶ ನೋಡುತ್ತೇವಲ್ಲ, ಅಂತಹ ಚಟುವಟಿಕೆಗಳ ಹಿಂದೆ ಇರುವುದು ಎಸ್‌ಕ್ಯೂಎಲ್ ಕೈವಾಡವೇ! ಎಸ್‌ಕ್ಯೂಎಲ್ ಅನ್ನು ೧೯೭೫ರಲ್ಲಿ ಮೊದಲ ಬಾರಿಗೆ ರೂಪಿಸಿದ್ದು ಐಬಿಎಂ ಸಂಸ್ಥೆಯ ಸಾಧನೆ. ಅಲ್ಲಿಂದ ಮುಂದಕ್ಕೆ ವಿವಿಧ ಡೇಟಾಬೇಸ್ ಮ್ಯಾನೇಜ್‌ಮೆಂಟ್ ಸಿಸ್ಟಂಗಳ (ಡಿಬಿಎಂಎಸ್) ಅಗತ್ಯಕ್ಕೆ ತಕ್ಕಂತೆ ಈ ಭಾಷೆ ಬದಲಾಗುತ್ತ ಬಂದಿದೆ. ಒರೇಕಲ್, ಎಸ್‌ಕ್ಯೂಎಲ್ ಸರ್ವರ್ ಮುಂತಾದ ಬೇರೆಬೇರೆ ಡಿಬಿಎಂಎಸ್‌ಗಳಲ್ಲಿ ಬಳಕೆಯಾಗುವ ಎಸ್‌ಕ್ಯೂಎಲ್‌ನಲ್ಲಿ ಕೊಂಚ ವ್ಯತ್ಯಾಸಗಳಿದ್ದರೂ ಅದರ ಮೂಲ ಸ್ವರೂಪ ಮಾತ್ರ ಒಂದೇ.