A PHP Error was encountered

Severity: Notice

Message: Trying to access array offset on value of type null

Filename: controllers/Dictionary.php

Line Number: 318

Backtrace:

File: /Appdata/padakanaja.karnataka.gov.in/application/controllers/Dictionary.php
Line: 318
Function: _error_handler

File: /Appdata/padakanaja.karnataka.gov.in/index.php
Line: 318
Function: require_once

A PHP Error was encountered

Severity: Notice

Message: Trying to access array offset on value of type null

Filename: controllers/Dictionary.php

Line Number: 319

Backtrace:

File: /Appdata/padakanaja.karnataka.gov.in/application/controllers/Dictionary.php
Line: 319
Function: _error_handler

File: /Appdata/padakanaja.karnataka.gov.in/index.php
Line: 318
Function: require_once

A PHP Error was encountered

Severity: Notice

Message: Trying to access array offset on value of type null

Filename: controllers/Dictionary.php

Line Number: 320

Backtrace:

File: /Appdata/padakanaja.karnataka.gov.in/application/controllers/Dictionary.php
Line: 320
Function: _error_handler

File: /Appdata/padakanaja.karnataka.gov.in/index.php
Line: 318
Function: require_once

Padakanaja - Dictionary View
ಅನಿಸಿಕೆ

ಪದಕೋಶ: ಕಂಪ್ಯೂಟರ್ ತಂತ್ರಜ್ಞಾನ ಪದವಿವರಣ ಕೋಶ | ಇಂಗ್ಲೀಷ್-ಕನ್ನಡ |ಪ್ರಕಾಶಕರು - ಕನ್ನಡ ಅಭಿವೃದ್ಧಿ ಪ್ರಾಧಿಕಾರ (2017)

Show entries
ಕ್ರಮ ಸ೦ಖ್ಯೆ ಇಂಗ್ಲೀಷ್ ಪದ
(English Word)
ಕನ್ನಡ ಪದ
(Kannada Word)
ಕನ್ನಡ ಅರ್ಥ
(Kannada Meaning)
ವಿಷಯ ವರ್ಗೀಕರಣ
(Word Subject)
ವ್ಯಾಕರಣ ವಿಶೇಷ
(Word Grammer)
ಕನ್ನಡ ಉಚ್ಚಾರಣೆ
(Kannada Pronunciation)
ಪರ್ಯಾಯ ಪದ
(Word Synonyms)
ಇಂಗ್ಲೀಷ್ ಅರ್ಥ
(English Meaning)
ಸಂಕ್ಷಿಪ್ತ ವಿವರಣೆ
(Short Description)
ದೀರ್ಘ ವಿವರಣೆ
(Long Description)
ಆಡಳಿತಾತ್ಮಕ ಪದ
(Administrative Word)
331 WHOIS ಹೂಈಸ್ ಯಾವುದೇ ಜಾಲತಾಣ ಯಾರ ಹೆಸರಿನಲ್ಲಿ ನೋಂದಣಿಯಾಗಿದೆ - ಅವರ ಸಂಪರ್ಕ ವಿವರಗಳೇನು ಎನ್ನುವುದನ್ನೆಲ್ಲ ತಿಳಿಸುವ ವ್ಯವಸ್ಥೆ ವಿಶ್ವವ್ಯಾಪಿ ಜಾಲದಲ್ಲಿ (ವರ್ಲ್ಡ್‌ವೈಡ್ ವೆಬ್) ಅಪಾರ ಸಂಖ್ಯೆಯ ಜಾಲತಾಣಗಳಿವೆ. ಹೊರಪ್ರಪಂಚದ ಸೈಟುಗಳಂತೆಯೇ ವೆಬ್‌ಲೋಕದ ಈ ಸೈಟುಗಳಿಗೂ ಮಾಲೀಕರಿರುತ್ತಾರೆ. ಮನೆಕಟ್ಟಲು ಸೈಟು ಕೊಳ್ಳುವಾಗ ಮಾಡುವಂತೆ ಜಾಲತಾಣವನ್ನು ನೋಂದಾಯಿಸುವಾಗಲೂ ಅದನ್ನು ಕೊಳ್ಳುತ್ತಿರುವವರು ಯಾರು ಎನ್ನುವುದರ ಬಗ್ಗೆ ಮಾಹಿತಿ ನೀಡಬೇಕಾದ್ದು ಕಡ್ಡಾಯ. ಜಾಲತಾಣಗಳನ್ನು ನಮ್ಮ ಹೆಸರಿಗೆ ನೋಂದಾಯಿಸಿಕೊಡುವ 'ರಿಜಿಸ್ಟ್ರಾರ್'ಗಳೆಂಬ ಸಂಸ್ಥೆಗಳು 'ದಿ ಇಂಟರ್‌ನೆಟ್ ಕಾರ್ಪೊರೇಶನ್ ಫಾರ್ ಅಸೈನ್ಡ್ ನೇಮ್ಸ್ ಆಂಡ್ ನಂಬರ್ಸ್' (ಐಕ್ಯಾನ್) ಎಂಬ ಜಾಗತಿಕ ಸಂಘಟನೆಯ ಪರವಾಗಿ ಈ ಮಾಹಿತಿಯನ್ನು ಸಂಗ್ರಹಿಸಿ ಶೇಖರಿಸಿಡುತ್ತವೆ. ಹೀಗೆ ಸಂಗ್ರಹವಾಗುತ್ತದಲ್ಲ ಮಾಹಿತಿ, ಅಂತರಜಾಲದ ಮುಕ್ತ ಸ್ವರೂಪಕ್ಕೆ ಅನುಗುಣವಾಗಿ ಅದನ್ನೂ ಮುಕ್ತವಾಗಿ ತೆರೆದಿಡಲಾಗುತ್ತದೆ. ಅಂದರೆ, ಯಾವುದೇ ಜಾಲತಾಣ ಯಾರ ಹೆಸರಿನಲ್ಲಿ ನೋಂದಣಿಯಾಗಿದೆ - ಅವರ ಸಂಪರ್ಕ ವಿವರಗಳೇನು ಎನ್ನುವುದನ್ನೆಲ್ಲ ಯಾರು ಬೇಕಾದರೂ ತಿಳಿಯುವುದು ಸಾಧ್ಯ. ಈ ಸೌಲಭ್ಯವನ್ನು ಒದಗಿಸಿಕೊಡುವ ವ್ಯವಸ್ಥೆಯೇ 'ಹೂ ಈಸ್' (WHOIS). ಐಕ್ಯಾನ್ ಸಂಸ್ಥೆ ನಿರ್ವಹಿಸುವ whois.icann.orgಗೆ ಭೇಟಿನೀಡಿ ಅಲ್ಲಿ ನಾವು ತಿಳಿಯಬೇಕೆಂದಿರುವ ತಾಣದ ವಿಳಾಸ ದಾಖಲಿಸಿದರೆ ಸಾಕು, ಅದರ ನೋಂದಣಿ ಕುರಿತ ವಿವರಗಳನ್ನು ಪಡೆದುಕೊಳ್ಳುವುದು ಸಾಧ್ಯ. ಹೀಗೆ ದೊರಕುವ ಮಾಹಿತಿಯನ್ನು ಸ್ಪಾಮ್ ಸಂದೇಶಗಳನ್ನು ಕಳಿಸಲು, ಫಿಶಿಂಗ್ ಪ್ರಯತ್ನಗಳನ್ನು ನಡೆಸಲು ಬಳಸುವ ಸಾಧ್ಯತೆ ಇರುತ್ತದಲ್ಲ, ಹಾಗಾಗಿ ಹೂ ಈಸ್ ಜಾಲತಾಣದಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲ, ಈ ವ್ಯವಸ್ಥೆಯ ಮೂಲಕ ನಮ್ಮ ಖಾಸಗಿ ಮಾಹಿತಿ ಎಲ್ಲರಿಗೂ ಕಾಣದಂತೆ ಮಾಡುವ 'ಡೊಮೈನ್ ಪ್ರೈವಸಿ' ಸೌಲಭ್ಯವನ್ನೂ ಹಲವು ರಿಜಿಸ್ಟ್ರಾರ್‌ಗಳು ಪರಿಚಯಿಸಿದ್ದಾರೆ (ಬಹಳಷ್ಟು ಸಾರಿ ಇದಕ್ಕಾಗಿ ಹೆಚ್ಚುವರಿ ಶುಲ್ಕ ನೀಡಬೇಕಾಗುತ್ತದೆ).
332 Wi-FI ವೈ-ಫೈ ನಿಸ್ತಂತು ಅಂತರಜಾಲ ಸಂಪರ್ಕ ವೈರು - ಕೇಬಲ್ಲುಗಳನ್ನು ಜೋಡಿಸುವ ಗೊಡವೆಯಿಲ್ಲದೆ ಸರಾಗವಾಗಿ ಅಂತರಜಾಲ ಸಂಪರ್ಕ ನೀಡಿಬಿಡುವ ವೈ-ಫೈ ತಂತ್ರಜ್ಞಾನದ ಪರಿಚಯ ನಮಗೆ ಚೆನ್ನಾಗಿಯೇ ಇದೆ. ರೇಡಿಯೋ ಅಲೆಗಳ ಮೂಲಕ ತನ್ನ ಸಂಪರ್ಕದಲ್ಲಿರುವ ಸಾಧನಗಳಿಗೆ ಅಂತರಜಾಲ ಸಂಪರ್ಕ ಒದಗಿಸಿಕೊಡುವುದು ಈ ತಂತ್ರಜ್ಞಾನದ ಹೆಗ್ಗಳಿಕೆ. ಅಂತರಜಾಲ ಸಂಪರ್ಕ ನಮ್ಮ ಮನೆಯವರೆಗೆ ಹಲವು ವಿಧಗಳಲ್ಲಿ ತಲುಪಬಹುದು. ಅದು ನಮ್ಮ ಸಾಧನಗಳಿಗೆ ಅರ್ಥವಾಗುವ ರೂಪಕ್ಕೆ ಬದಲಾಗುವುದು ಮೋಡೆಮ್ ಮೂಲಕ. ಈ ಸಂಕೇತಗಳನ್ನು ವೈ-ಫೈ ರೂಪಕ್ಕೆ ತರುವುದು ರೌಟರ್ ಎನ್ನುವ ಸಾಧನದ ಕೆಲಸ (ಬಹಳಷ್ಟು ಸನ್ನಿವೇಶಗಳಲ್ಲಿ ಮೋಡೆಮ್, ರೌಟರ್ ಎರಡೂ ಸಾಧನಗಳ ಕೆಲಸವನ್ನು ಒಂದೇ ಯಂತ್ರ ಮಾಡುತ್ತದೆ). ಈ ಸಾಧನದಿಂದ ಹೊರಹೊಮ್ಮುವ ಸಂಕೇತಗಳನ್ನು ಬಳಸಲು ಶಕ್ತವಾದ ಯಾವುದೇ ಸಾಧನ ಅಂತರಜಾಲ ಸಂಪರ್ಕವನ್ನು ಪಡೆದುಕೊಳ್ಳಬಹುದು. ಕಂಪ್ಯೂಟರ್ - ಟ್ಯಾಬ್ಲೆಟ್ - ಮೊಬೈಲ್ ಮಾತ್ರವೇ ಅಲ್ಲ, ಸ್ಮಾರ್ಟ್ ಟೀವಿ - ಸ್ಮಾರ್ಟ್ ವಾಚ್ - ಸ್ಟ್ರೀಮಿಂಗ್ ಡಿವೈಸ್‌ಗಳಂತಹ ಇನ್ನೂ ಅನೇಕ ಸಾಧನಗಳೂ ವೈ-ಫೈ ಬಳಸುತ್ತವೆ. ಅಂದಹಾಗೆ 'ವೈ-ಫೈ' ಹೆಸರಿನ ಹಿನ್ನೆಲೆ ಕುರಿತು ಕೊಂಚ ಗೊಂದಲವಿದೆ. 'ಹೈ-ಫೈ' ಎಲ್ಲರಿಗೂ ಪರಿಚಯವಿತ್ತಲ್ಲ, ಅದನ್ನೇ ಅನುಸರಿಸಿ ವೈ-ಫೈ ಎನ್ನುವ ಹೆಸರು ರೂಪಿಸಲಾಯಿತು ಎನ್ನುವುದನ್ನು ಅನೇಕರು ಒಪ್ಪುತ್ತಾರೆ. ಈ ತಂತ್ರಜ್ಞಾನ ಪರಿಚಯವಾದ ಹೊಸತರಲ್ಲಿ ಪ್ರಕಟವಾದ ಜಾಹೀರಾತುಗಳಲ್ಲಿ 'ವೈರ್‌ಲೆಸ್ ಫಿಡೆಲಿಟಿ' ಎನ್ನುವ ಹೆಸರಿನ ಪ್ರಸ್ತಾಪವೂ ಇತ್ತು; 'ವೈ-ಫೈ' ಎನ್ನುವುದು ಅದೇ ಹೆಸರಿನ ಹ್ರಸ್ವರೂಪ ಎನ್ನುವುದು ಇನ್ನು ಕೆಲವರ ಅನಿಸಿಕೆ. ವೈರು - ಕೇಬಲ್ಲುಗಳನ್ನು ಜೋಡಿಸುವ ಗೊಡವೆಯಿಲ್ಲದೆ ಸರಾಗವಾಗಿ ಅಂತರಜಾಲ ಸಂಪರ್ಕ ನೀಡಿಬಿಡುವ ವೈ-ಫೈ ತಂತ್ರಜ್ಞಾನದ ಪರಿಚಯ ನಮಗೆ ಚೆನ್ನಾಗಿಯೇ ಇದೆ. ರೇಡಿಯೋ ಅಲೆಗಳ ಮೂಲಕ ತನ್ನ ಸಂಪರ್ಕದಲ್ಲಿರುವ ಸಾಧನಗಳಿಗೆ ಅಂತರಜಾಲ ಸಂಪರ್ಕ ಒದಗಿಸಿಕೊಡುವುದು ಈ ತಂತ್ರಜ್ಞಾನದ ಹೆಗ್ಗಳಿಕೆ. ಅಂತರಜಾಲ ಸಂಪರ್ಕ ನಮ್ಮ ಮನೆಯವರೆಗೆ ಹಲವು ವಿಧಗಳಲ್ಲಿ ತಲುಪಬಹುದು. ಅದು ನಮ್ಮ ಸಾಧನಗಳಿಗೆ ಅರ್ಥವಾಗುವ ರೂಪಕ್ಕೆ ಬದಲಾಗುವುದು ಮೋಡೆಮ್ ಮೂಲಕ. ಈ ಸಂಕೇತಗಳನ್ನು ವೈ-ಫೈ ರೂಪಕ್ಕೆ ತರುವುದು ರೌಟರ್ ಎನ್ನುವ ಸಾಧನದ ಕೆಲಸ (ಬಹಳಷ್ಟು ಸನ್ನಿವೇಶಗಳಲ್ಲಿ ಮೋಡೆಮ್, ರೌಟರ್ ಎರಡೂ ಸಾಧನಗಳ ಕೆಲಸವನ್ನು ಒಂದೇ ಯಂತ್ರ ಮಾಡುತ್ತದೆ). ಈ ಸಾಧನದಿಂದ ಹೊರಹೊಮ್ಮುವ ಸಂಕೇತಗಳನ್ನು ಬಳಸಲು ಶಕ್ತವಾದ ಯಾವುದೇ ಸಾಧನ ಅಂತರಜಾಲ ಸಂಪರ್ಕವನ್ನು ಪಡೆದುಕೊಳ್ಳಬಹುದು. ಕಂಪ್ಯೂಟರ್ - ಟ್ಯಾಬ್ಲೆಟ್ - ಮೊಬೈಲ್ ಮಾತ್ರವೇ ಅಲ್ಲ, ಸ್ಮಾರ್ಟ್ ಟೀವಿ - ಸ್ಮಾರ್ಟ್ ವಾಚ್ - ಸ್ಟ್ರೀಮಿಂಗ್ ಡಿವೈಸ್‌ಗಳಂತಹ ಇನ್ನೂ ಅನೇಕ ಸಾಧನಗಳೂ ವೈ-ಫೈ ಬಳಸುತ್ತವೆ. ಅಂದಹಾಗೆ 'ವೈ-ಫೈ' ಹೆಸರಿನ ಹಿನ್ನೆಲೆ ಕುರಿತು ಕೊಂಚ ಗೊಂದಲವಿದೆ. 'ಹೈ-ಫೈ' ಎಲ್ಲರಿಗೂ ಪರಿಚಯವಿತ್ತಲ್ಲ, ಅದನ್ನೇ ಅನುಸರಿಸಿ ವೈ-ಫೈ ಎನ್ನುವ ಹೆಸರು ರೂಪಿಸಲಾಯಿತು ಎನ್ನುವುದನ್ನು ಅನೇಕರು ಒಪ್ಪುತ್ತಾರೆ. ಈ ತಂತ್ರಜ್ಞಾನ ಪರಿಚಯವಾದ ಹೊಸತರಲ್ಲಿ ಪ್ರಕಟವಾದ ಜಾಹೀರಾತುಗಳಲ್ಲಿ 'ವೈರ್‌ಲೆಸ್ ಫಿಡೆಲಿಟಿ' ಎನ್ನುವ ಹೆಸರಿನ ಪ್ರಸ್ತಾಪವೂ ಇತ್ತು; 'ವೈ-ಫೈ' ಎನ್ನುವುದು ಅದೇ ಹೆಸರಿನ ಹ್ರಸ್ವರೂಪ ಎನ್ನುವುದು ಇನ್ನು ಕೆಲವರ ಅನಿಸಿಕೆ.
333 Wikipedia ವಿಕಿಪೀಡಿಯ ಯಾರು ಬೇಕಾದರೂ ಸಂಪಾದಿಸಬಹುದಾದ ಮುಕ್ತ ಆನ್‌ಲೈನ್ ವಿಶ್ವಕೋಶ ಯಾವುದೋ ವಿಷಯದ ಕುರಿತು ಗೂಗಲ್ ಸರ್ಚ್ ಮಾಡುವಾಗ ಬಹಳಷ್ಟು ಸಾರಿ ಅಲ್ಲಿ ಕಾಣುವ ಫಲಿತಾಂಶಗಳಲ್ಲಿ ವಿಕಿಪೀಡಿಯ ತಾಣಕ್ಕೆ ಅಗ್ರಸ್ಥಾನ ಇರುತ್ತದೆ. ಈ ವಿಕಿಪೀಡಿಯ ಎನ್ನುವುದೊಂದು ವಿಶ್ವಕೋಶ. ಹಿಂದೆ ಗ್ರಂಥಾಲಯದ ಕಪಾಟಿನಲ್ಲಿರುತ್ತಿದ್ದ ದೊಡ್ಡದೊಡ್ಡ ಪುಸ್ತಕಗಳ ರೂಪದ ವಿಶ್ವಕೋಶಕ್ಕೂ ವಿಕಿಪೀಡಿಯಕ್ಕೂ ಬಹಳ ವ್ಯತ್ಯಾಸವಿದೆ. ಇದು ಮುದ್ರಿತ ರೂಪದಲ್ಲಿಲ್ಲ ಮತ್ತು ಇದನ್ನು ಬಳಸಲು ಹಣ ಕೊಡಬೇಕಿಲ್ಲ ಎನ್ನುವುದು ಒಂದು ವ್ಯತ್ಯಾಸವಾದರೆ ಇದಕ್ಕೆ ಯಾರು ಬೇಕಾದರೂ ಮಾಹಿತಿ ಸೇರಿಸಬಹುದು, ಅಲ್ಲಿರುವ ಮಾಹಿತಿಯನ್ನು ಉತ್ತಮಪಡಿಸಬಹುದು ಎನ್ನುವುದು ಇನ್ನೊಂದು ಮುಖ್ಯವಾದ ವ್ಯತ್ಯಾಸ. ವಿಕಿಮೀಡಿಯ ಫೌಂಡೇಶನ್ ಆಶ್ರಯದಲ್ಲಿ ನಡೆಯುವ ಈ ತಾಣವನ್ನು ರೂಪಿಸಿದ ಕೀರ್ತಿ ಜಿಮ್ಮಿ ವೇಲ್ಸ್ ಹಾಗೂ ಲ್ಯಾರಿ ಸ್ಯಾಂಗರ್ ಅವರದ್ದು. ಕನ್ನಡವೂ ಸೇರಿದಂತೆ ಪ್ರಪಂಚದ ೨೫೦ಕ್ಕೂ ಹೆಚ್ಚು ಭಾಷೆಗಳಲ್ಲಿ ವಿಕಿಪೀಡಿಯ ಲಭ್ಯವಿದೆ. ಅಂದಹಾಗೆ ವಿಕಿ ಎಂಬ ಶಬ್ದ ಹವಾಯಿ ಭಾಷೆಯದ್ದು. ಆ ಭಾಷೆಯಲ್ಲಿ ವಿಕಿ ಎಂದರೆ 'ಚುರುಕಾದ' ಅಥವಾ 'ಚಟುವಟಿಕೆಯ' ಎಂದು ಅರ್ಥವಂತೆ.
334 Wildcard ವೈಲ್ಡ್‌ಕಾರ್ಡ್ ಕಂಪ್ಯೂಟರಿಗೆ ನೀಡುವ ಆದೇಶದಲ್ಲಿ ಒಂದು ಅಥವಾ ಹೆಚ್ಚಿನ ಸಂಖ್ಯೆಯ ಅಕ್ಷರ - ಅಂಕಿ - ಲೇಖನಚಿಹ್ನೆಗಳನ್ನು ಪ್ರತಿನಿಧಿಸುವ ಚಿಹ್ನೆ ಅರ್ಹತಾ ಸುತ್ತುಗಳಲ್ಲಿ ಭಾಗವಹಿಸದೆ ಸ್ಪರ್ಧೆಯ ಮುಂದಿನ ಹಂತಕ್ಕೆ ನೇರ ಪ್ರವೇಶ ಪಡೆಯುವವರಿಗೆ 'ವೈಲ್ಡ್ ಕಾರ್ಡ್' ಸ್ಪರ್ಧಿಗಳೆಂಬ ಹೆಸರಿರುವುದನ್ನು ನಾವು ಕೇಳಿರುತ್ತೇವೆ. ಕಂಪ್ಯೂಟರ್ ಜಗತ್ತಿನಲ್ಲಿ ಕೆಲ ಚಿಹ್ನೆಗಳನ್ನೂ ಈ ಹೆಸರಿನಿಂದ ಗುರುತಿಸಲಾಗುತ್ತದೆ. 'ವೈಲ್ಡ್‌ಕಾರ್ಡ್ ಕ್ಯಾರೆಕ್ಟರ್' ಎಂದು ಕರೆಸಿಕೊಳ್ಳುವ ಈ ಚಿಹ್ನೆಗಳು ಕಂಪ್ಯೂಟರಿಗೆ ನೀಡುವ ಆದೇಶದಲ್ಲಿ ಒಂದು ಅಥವಾ ಹೆಚ್ಚಿನ ಸಂಖ್ಯೆಯ ಅಕ್ಷರ - ಅಂಕಿ - ಲೇಖನಚಿಹ್ನೆಗಳನ್ನು ಪ್ರತಿನಿಧಿಸಬಲ್ಲವು. ನಿಮಗೆ 'notes' ಎಂಬ ಪದದಿಂದ ಪ್ರಾರಂಭವಾಗುವ ಹೆಸರುಳ್ಳ ಎಲ್ಲ ಕಡತಗಳನ್ನೂ ನೋಡಬೇಕಿದೆ ಎಂದುಕೊಳ್ಳೋಣ. ಸರ್ಚ್ ಪರದೆಯಲ್ಲಿ 'notes*' ಎಂದು ಟೈಪ್ ಮಾಡಿದರೆ ನಿಮ್ಮ ಕಂಪ್ಯೂಟರ್ ಅಂತಹ ಎಲ್ಲ ಕಡತಗಳನ್ನೂ (notes1.txt, notes-kannada.doc - ಹೀಗೆ) ಪಟ್ಟಿಮಾಡಿ ತೋರಿಸುತ್ತದೆ. ಇಲ್ಲಿ '*' ಎನ್ನುವುದು ಒಂದಕ್ಕಿಂತ ಹೆಚ್ಚಿನ ಸಂಭಾವ್ಯ ಅಕ್ಷರಗಳನ್ನು ಸೂಚಿಸುವ ವೈಲ್ಡ್‌ಕಾರ್ಡ್ ಕ್ಯಾರೆಕ್ಟರ್. ಇದನ್ನು ಗೂಗಲ್ ಸರ್ಚ್‌ನಲ್ಲೂ ಬಳಸುವುದು ಸಾಧ್ಯ - ಕಪ್ಪೆ ಅರಭಟ್ಟನ ಶಾಸನದ ಪಠ್ಯವನ್ನು '* ಕಲಿಗೆ * ವಿಪರೀತನ್' ಎಂದು ಬಿಟ್ಟಪದ ತುಂಬಿಸುವ ರೀತಿಯಲ್ಲಿ ಗೂಗಲಿಸಿದರೆ ವೈಲ್ಡ್‌ಕಾರ್ಡ್ ಕ್ಯಾರೆಕ್ಟರುಗಳ ಸ್ಥಳಕ್ಕೆ ಬರಬೇಕಾದ ಸರಿಯಾದ ಪದಗಳನ್ನು ('ಬಾಧಿಪ್ಪ ಕಲಿಗೆ ಕಲಿಯುಗ ವಿಪರೀತನ್') ಹುಡುಕಿಕೊಳ್ಳಬಹುದು. ಇದೇರೀತಿ ವಿವಿಧ ತಂತ್ರಾಂಶಗಳಲ್ಲಿ '?', '%' ಮುಂತಾದ ಚಿಹ್ನೆಗಳೂ ವೈಲ್ಡ್‌ಕಾರ್ಡ್ ಕ್ಯಾರೆಕ್ಟರ್‌ಗಳಾಗಿ ಬಳಕೆಯಾಗುತ್ತವೆ. ಈ ಪೈಕಿ '?' ಅನ್ನು ಒಂದು ಅಕ್ಷರದ ಬದಲಿಗೆ ಹಾಗೂ '%' ಅನ್ನು ಹೆಚ್ಚಿನ ಸಂಖ್ಯೆಯ ಅಕ್ಷರಗಳ ಬದಲಿಗೆ ('*'ನಂತೆ) ಬಳಸುವುದು ಸಂಪ್ರದಾಯ.
335 Wireless Charging ವೈರ್‌ಲೆಸ್ ಚಾರ್ಜಿಂಗ್ ಇಂಡಕ್ಷನ್ (ಪ್ರೇರಣೆ) ಎಂಬ ವಿದ್ಯಮಾನ ಬಳಸಿ ವಿದ್ಯುನ್ಮಾನ ಸಾಧನಗಳನ್ನು ಚಾರ್ಜ್ ಮಾಡುವ ನಿಸ್ತಂತು ವ್ಯವಸ್ಥೆ ನಮ್ಮ ಮೊಬೈಲ್ ಯಾವಾಗಲೂ ಸಕ್ರಿಯವಾಗಿರಬೇಕಾದರೆ ಅದರಲ್ಲಿ ಸಾಕಷ್ಟು ಚಾರ್ಜ್ ಇರುವಂತೆ ನೋಡಿಕೊಳ್ಳುವುದು ಅನಿವಾರ್ಯ. ಮೊಬೈಲನ್ನು ಚಾರ್ಜ್ ಮಾಡುವ ಮಾರ್ಗಗಳಲ್ಲಿ ವೈರ್‌ಲೆಸ್ ಚಾರ್ಜಿಂಗ್ ಕೂಡ ಒಂದು. ನಾವೆಲ್ಲ ಸಾಮಾನ್ಯವಾಗಿ ಮಾಡುವಂತೆ ಕೇಬಲ್‌ನ ಒಂದು ತುದಿಯನ್ನು ಚಾರ್ಜರಿಗೂ ಇನ್ನೊಂದನ್ನು ಮೊಬೈಲಿಗೂ ಚುಚ್ಚಿಡುವ ಬದಲು ಇಲ್ಲಿ ಪುಟ್ಟದೊಂದು ಫಲಕದ (ಚಾರ್ಜಿಂಗ್ ಪ್ಯಾಡ್) ಮೇಲೆ ಮೊಬೈಲನ್ನು ಇಟ್ಟರೆ ಸಾಕು, ಅದು ಚಾರ್ಜ್ ಆಗಲು ಶುರುವಾಗುತ್ತದೆ! ಅಡುಗೆಮನೆಯ ಆಧುನಿಕ ಒಲೆಯಂತೆ ಇಲ್ಲೂ ಬಳಕೆಯಾಗುವುದು ಇಂಡಕ್ಷನ್ (ಪ್ರೇರಣೆ) ಎಂಬ ವಿದ್ಯಮಾನ. ಇಂಡಕ್ಷನ್ ಒಲೆಯಲ್ಲಿ ಈ ವಿದ್ಯಮಾನ ಆಹಾರ ಪದಾರ್ಥಗಳನ್ನು ಬಿಸಿಮಾಡಿದರೆ ಮೊಬೈಲ್ ಚಾರ್ಜರಿನಲ್ಲಿ ಬ್ಯಾಟರಿಯನ್ನು ಚಾರ್ಜ್ ಮಾಡುತ್ತದೆ. ಆದರೆ ನೆನಪಿಡಿ, ಎಲ್ಲ ಗ್ಯಾಜೆಟ್‌ಗಳನ್ನೂ ಈ ವಿಧಾನದ ಮೂಲಕ ಚಾರ್ಜ್ ಮಾಡುವಂತಿಲ್ಲ್ಲ; ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ ಮಾದರಿಗಳು ಮಾತ್ರವೇ ಹೀಗೆ ಚಾರ್ಜ್ ಆಗಬಲ್ಲವು. ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಬಳಸಿ ಇತರ ಸಾಧನಗಳನ್ನೂ ಚಾರ್ಜ್ ಮಾಡಲು ಕೆಲ ಹೆಚ್ಚುವರಿ ಸಲಕರಣೆಗಳು ಮಾರುಕಟ್ಟೆಯಲ್ಲಿ ಸಿಗುತ್ತವಾದರೂ ಅದನ್ನು ನಮ್ಮ ಜವಾಬ್ದಾರಿ ಹಾಗೂ ಎಚ್ಚರಿಕೆಯಲ್ಲೇ ಬಳಸಬೇಕು.
336 Word Processor ವರ್ಡ್ ಪ್ರಾಸೆಸರ್ ಕಡತಗಳ ರಚನೆ, ಸಂಪಾದನೆ, ಪುಟವಿನ್ಯಾಸ ಹಾಗೂ ಮುದ್ರಣದಲ್ಲಿ ನೆರವಾಗುವ ತಂತ್ರಾಂಶ ಕಂಪ್ಯೂಟರಿನ ಅಸಂಖ್ಯ ಉಪಯೋಗಗಳ ಪೈಕಿ ಕಡತಗಳ ರಚನೆ, ಸಂಪಾದನೆ, ಪುಟವಿನ್ಯಾಸ ಹಾಗೂ ಮುದ್ರಣಕ್ಕೆ ಪ್ರಮುಖ ಸ್ಥಾನವಿದೆ. ಇವಿಷ್ಟೂ ಅಂಶಗಳನ್ನು ಒಟ್ಟುಸೇರಿಸಿ 'ವರ್ಡ್ ಪ್ರಾಸೆಸಿಂಗ್' (ಪದಸಂಸ್ಕರಣೆ) ಎಂದು ಗುರುತಿಸಲಾಗುತ್ತದೆ. ಪದಸಂಸ್ಕರಣೆಯ ಈ ಕೆಲಸದಲ್ಲಿ ನೆರವಾಗುವ ತಂತ್ರಾಂಶಗಳನ್ನು ವರ್ಡ್ ಪ್ರಾಸೆಸರ್, ಅಂದರೆ ಪದಸಂಸ್ಕಾರಕಗಳೆಂದು ಕರೆಯುತ್ತಾರೆ. ಅಂದಹಾಗೆ ಪದಸಂಸ್ಕಾರಕಗಳಲ್ಲಿರುವುದು ಕಡತಗಳ ರಚನೆ ಹಾಗೂ ವಿನ್ಯಾಸಕ್ಕೆ ಬೇಕಾದ ಸೌಲಭ್ಯಗಳಷ್ಟೇ ಅಲ್ಲ. ಕಡತದಲ್ಲಿರುವ ಪದಗಳ ಸಂಖ್ಯೆಯನ್ನು ತಿಳಿಸುವ, ಅಕ್ಷರದೋಷ - ವ್ಯಾಕರಣದ ತಪ್ಪುಗಳನ್ನು ತೋರಿಸುವ, ಕಡತದಲ್ಲಿ ಮಾಡಲಾದ ಬದಲಾವಣೆಗಳ ಇತಿಹಾಸವನ್ನು ತೋರಿಸುವಂತಹ ಅನುಕೂಲಗಳೂ ಅನೇಕ ಪದಸಂಸ್ಕಾರಕಗಳಲ್ಲಿರುತ್ತವೆ. ಪಠ್ಯವನ್ನಷ್ಟೇ ಟೈಪ್ ಮಾಡಿ ಉಳಿಸಿಡಲು ಸಹಾಯಮಾಡುವ ನೋಟ್‌ಪ್ಯಾಡ್‌ನಂತಹ ಸರಳ ತಂತ್ರಾಂಶಗಳಿಂದ ಪ್ರಾರಂಭಿಸಿ ಪತ್ರಿಕೆ-ಪುಸ್ತಕಗಳ ವಿನ್ಯಾಸದಲ್ಲಿ ಬಳಕೆಯಾಗುವ ಇನ್‌ಡಿಸೈನ್‌ನಂತಹ ತಂತ್ರಾಂಶಗಳವರೆಗೆ ವಿವಿಧ ಉದ್ದೇಶಗಳಿಗಾಗಿ ಬೇರೆಬೇರೆ ಪದಸಂಸ್ಕಾರಕಗಳನ್ನು ಬಳಸುವುದು ಸಾಮಾನ್ಯ ಅಭ್ಯಾಸ. ಮೈಕ್ರೋಸಾಫ್ಟ್ ಆಫೀಸ್, ಓಪನ್‌ಆಫೀಸ್, ಲಿಬ್ರೆಆಫೀಸ್ ಮುಂತಾದ ಎಲ್ಲ ತಂತ್ರಾಂಶಸಂಗ್ರಹಗಳಲ್ಲೂ ಒಂದೊಂದು ಪದಸಂಸ್ಕಾರಕ ಇರುತ್ತದೆ. ಮೈಕ್ರೋಸಾಫ್ಟ್‌ನ ಆಫೀಸ್ ತಂತ್ರಾಂಶಸಂಗ್ರಹದ ಭಾಗವಾದ 'ಮೈಕ್ರೋಸಾಫ್ಟ್ ವರ್ಡ್' ಸಾಕಷ್ಟು ಹೆಸರುಮಾಡಿರುವ, ವ್ಯಾಪಕವಾಗಿ ಬಳಕೆಯಾಗುವ ಇಂತಹ ಪದಸಂಸ್ಕಾರಕಗಳಲ್ಲೊಂದು. ಕನ್ನಡದಲ್ಲಿ ಕಡತಗಳ ಸೃಷ್ಟಿಯನ್ನು ಸಾಧ್ಯವಾಗಿಸುವ ಬರಹ, ನುಡಿ, ಪದ ಮುಂತಾದ ತಂತ್ರಾಂಶಗಳೂ ಪದಸಂಸ್ಕಾರಕಗಳೇ.
337 Worldwide Web ವರ್ಲ್ಡ್​ವೈಡ್ ವೆಬ್ ಜಾಲತಾಣಗಳು (ವೆಬ್‌ಸೈಟ್), ಅವುಗಳ ಪುಟಗಳು (ವೆಬ್‌ಪೇಜ್) ಹಾಗೂ ಕಡತಗಳ (ಡಾಕ್ಯುಮೆಂಟ್ಸ್) ಮೂಲಕ ಅಂತರಜಾಲದಲ್ಲಿ ಮಾಹಿತಿಯನ್ನು ಪ್ರಕಟಿಸಲು ಸಾಧ್ಯವಾಗಿಸುವ ವ್ಯವಸ್ಥೆ ಬಹುತೇಕ ಎಲ್ಲ ಜಾಲತಾಣಗಳ ವಿಳಾಸಗಳೂ 'WWW' ಎಂಬ ಮೂರು ಅಕ್ಷರಗಳಿಂದ ಪ್ರಾರಂಭವಾಗುತ್ತವಲ್ಲ, ಇದು 'ವರ್ಲ್ಡ್‌ವೈಡ್ ವೆಬ್' ಎಂಬ ಹೆಸರಿನ ಸಂಕ್ಷಿಪ್ತರೂಪ. ಕನ್ನಡದಲ್ಲಿ ವಿಶ್ವವ್ಯಾಪಿ ಜಾಲವೆಂದು ಕರೆಯುವುದು ಇದನ್ನೇ. ಸಾಮಾನ್ಯ ಬಳಕೆಯಲ್ಲಿ ಅಂತರಜಾಲ (ಇಂಟರ್‌ನೆಟ್) ಹಾಗೂ ವಿಶ್ವವ್ಯಾಪಿ ಜಾಲದ (ವರ್ಲ್ಡ್‌ವೈಡ್ ವೆಬ್) ಹೆಸರುಗಳನ್ನು ಪರ್ಯಾಯವಾಗಿ ಬಳಸಲಾಗುತ್ತದೆ, ನಿಜ. ಆದರೆ ಇವೆರಡೂ ಒಂದೇ ಅಲ್ಲ: ವಿಶ್ವವ್ಯಾಪಿ ಜಾಲ ಅಂತರಜಾಲದ ಒಂದು ಭಾಗ ಅಷ್ಟೇ. ವಿಶ್ವದ ವಿವಿಧೆಡೆಗಳಲ್ಲಿರುವ ಕಂಪ್ಯೂಟರುಗಳು, ಮೊಬೈಲ್ ಫೋನುಗಳು, ಸಂಬಂಧಿತ ಸಾಧನಗಳು, ಅವುಗಳು ಸೇರಿ ರೂಪುಗೊಂಡಿರುವ ಜಾಲಗಳು - ಇವೆಲ್ಲ ಸೇರಿ ರೂಪುಗೊಂಡಿರುವುದೇ ಅಂತರಜಾಲ. ವಿವಿಧ ಯಂತ್ರಾಂಶಗಳು, ಅವುಗಳ ನಡುವೆ ಸಂವಹನ ಸಾಧ್ಯವಾಗಿಸುವ ವ್ಯವಸ್ಥೆಗಳೆಲ್ಲ ಇದರ ಭಾಗಗಳು. ಜಾಲತಾಣಗಳು (ವೆಬ್‌ಸೈಟ್), ಅವುಗಳ ಪುಟಗಳು (ವೆಬ್‌ಪೇಜ್) ಹಾಗೂ ಕಡತಗಳ (ಡಾಕ್ಯುಮೆಂಟ್ಸ್) ಮೂಲಕ ಅಂತರಜಾಲದಲ್ಲಿ ಮಾಹಿತಿಯನ್ನು ಪ್ರಕಟಿಸಲು ಸಾಧ್ಯವಾಗಿಸುವುದು ವಿಶ್ವವ್ಯಾಪಿ ಜಾಲ. ಹೀಗೆ ಪ್ರಕಟಿಸಿದ ಬಹುಮಾಧ್ಯಮ (ಮಲ್ಟಿಮೀಡಿಯಾ) ಮಾಹಿತಿಯನ್ನು ನಿರ್ದಿಷ್ಟ ವಿಳಾಸಗಳ (ಯುಆರೆಲ್) ಮೂಲಕ ಪಡೆದುಕೊಳ್ಳುವುದು, ಕೊಂಡಿಗಳ (ಹೈಪರ್‌ಲಿಂಕ್) ಮೂಲಕ ವಿವಿಧ ಆಕರಗಳ ನಡುವೆ ಸಂಪರ್ಕ ಕಲ್ಪಿಸುವುದು ವಿಶ್ವವ್ಯಾಪಿ ಜಾಲದಿಂದಾಗಿ ಸಾಧ್ಯವಾಗುತ್ತದೆ. ವಿಶ್ವವ್ಯಾಪಿ ಜಾಲವನ್ನು ರೂಪಿಸಿದ ಶ್ರೇಯ ಬ್ರಿಟಿಷ್ ವಿಜ್ಞಾನಿ ಟಿಮ್ ಬರ್ನರ್‍ಸ್-ಲೀ ಅವರಿಗೆ ಸಲ್ಲುತ್ತದೆ.
338 Zip file ಜ಼ಿಪ್ ಫೈಲ್ ಮೂಲ ಕಡತದ ಗಾತ್ರವನ್ನು ಕಡಿಮೆಮಾಡುವ ಉದ್ದೇಶದಿಂದ ನಿರ್ದಿಷ್ಟ ತಂತ್ರಾಂಶ ಬಳಸಿ ಉಳಿಸಿಡಲಾದ ಅದರ ಪ್ರತಿ ಡಿಜಿಟಲ್ ರೂಪದ ಪ್ರತಿ ಕಡತಕ್ಕೂ ಅದರಲ್ಲಿರುವ ಮಾಹಿತಿಯ ಪ್ರಮಾಣಕ್ಕೆ ಅನುಗುಣವಾಗಿ ಒಂದು ನಿರ್ದಿಷ್ಟ ಗಾತ್ರ ಇರುತ್ತದೆ. ಬಿಟ್-ಬೈಟ್‌ಗಳಲ್ಲಿ ಅಳೆಯುವುದು ಈ ಗಾತ್ರವನ್ನೇ. ಕಡತದ ಗಾತ್ರ ದೊಡ್ಡದಾದರೆ ಅದನ್ನು ಉಳಿಸಿಡಲು ಹೆಚ್ಚಿನ ಸ್ಥಳಾವಕಾಶ ಬೇಕು. ನಾವೇ ಉಳಿಸಿಟ್ಟುಕೊಳ್ಳುವುದಾದರೆ ಸರಿ; ಆದರೆ ಬೇರೆಯವರಿಗೆ ಕಳುಹಿಸಬೇಕೆಂದರೆ ತೀರಾ ದೊಡ್ಡ ಕಡತಗಳನ್ನು ಕಳುಹಿಸುವುದು ಕಷ್ಟ. ಇದಕ್ಕಾಗಿ ಬಳಕೆಯಾಗುವುದೇ ಕಡತದ ಗಾತ್ರವನ್ನು ಕಡಿಮೆಮಾಡುವ 'ಕಂಪ್ರೆಶನ್' ತಂತ್ರ. ಸಾಮಾನ್ಯ ಬಳಕೆಯಲ್ಲಿ "ಜಿಪ್ ಮಾಡುವುದು" ಎಂದು ಗುರುತಿಸುವುದು ಇದನ್ನೇ. ಯಾವುದೇ ಕಡತ ಮೆಮೊರಿಯಲ್ಲಿ ಶೇಖರವಾಗುವುದು ಹೇಗೆ? ಅದು ಮೊದಲಿಗೆ ಕಂಪ್ಯೂಟರಿಗೆ ಅರ್ಥವಾಗುವ ಒಂದು-ಸೊನ್ನೆಗಳ ಬೈನರಿ ಭಾಷೆಗೆ ಬದಲಾಗುತ್ತದೆ. ಹೀಗೆ ಬದಲಾಗುವಾಗ ಅದರಲ್ಲಿ ಒಂದೇ ಮಾಹಿತಿ ಹಲವೆಡೆ ಪುನರಾವರ್ತನೆಯಾಗಿರುವುದು ಸಾಧ್ಯ. ಅದೇ ಮಾಹಿತಿಯನ್ನು ಮತ್ತೆಮತ್ತೆ ಉಳಿಸುವ ಬದಲು ಒಮ್ಮೆ ಮಾತ್ರ ಉಳಿಸಿಟ್ಟು ಅದೇ ಮಾಹಿತಿ ಎಲ್ಲೆಲ್ಲಿ ಬರಬೇಕು ಎನ್ನುವ ಲೆಕ್ಕ ಇಟ್ಟುಕೊಂಡರೆ ಕಡತದ ಗಾತ್ರ ಕಡಿಮೆಯಾಗುತ್ತದಲ್ಲ, "ಜಿಪ್ ಮಾಡಲು" ಬಳಕೆಯಾಗುವ ಹಲವು ತಂತ್ರಾಂಶಗಳು ಇದೇ ತಂತ್ರ ಬಳಸುತ್ತವೆ; ಮೂಲ ಕಡತವನ್ನು ಜಿಪ್ ಫೈಲಿನಿಂದ ಹೊರತೆಗೆಯುವಾಗ ಈ ಹಿಂದೆ ಉಳಿಸಿಟ್ಟುಕೊಂಡ ಮಾಹಿತಿ ಬಳಸಿ ಅದರ ಮರುಸೃಷ್ಟಿ ಮಾಡುತ್ತವೆ! ಕಡತಗಳಲ್ಲಿ ಹೀಗೆ ಪುನರಾವರ್ತನೆಯಾಗಿರುವ ಮಾಹಿತಿಯ ಪ್ರಮಾಣ ಕಡಿಮೆಯಿದ್ದರೆ ಅವನ್ನು ಜಿಪ್ ಮಾಡಿದರೂ ಗಾತ್ರದಲ್ಲಿ ಗಮನಾರ್ಹ ಬದಲಾವಣೆಯೇನೂ ಕಾಣುವುದಿಲ್ಲ. ಅಂತಹ ಸನ್ನಿವೇಶಗಳಲ್ಲಿ (ಉದಾ: ಚಿತ್ರಗಳು) ಕಡತದ ಗಾತ್ರ ಕಡಿಮೆಮಾಡಲು ಬೇರೆ ಬೇರೆ ರೀತಿಯ ಕಂಪ್ರೆಶನ್ ವಿಧಾನಗಳು ಬಳಕೆಯಾಗುತ್ತವೆ.